ಭಾರತದಲ್ಲಿ ಧಾರ್ಮಿಕ ಚಟುವಟಿಕೆ ನಡೆಸಲು ದಲೈಲಾಮಾ ಮುಕ್ತರು: ಭಾರತ ಸ್ಪಷ್ಟನೆ

ಭಾರತದಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಟಿಬೆಟ್ ಧರ್ಮಗುರು ದಲೈಲಾಮಾ ಮುಕ್ತರು ಎಂದು ಭಾರತ ಶುಕ್ರವಾರ ಸ್ಪಷ್ಟಪಡಿಸಿದೆ...
ಟಿಬೆಟ್ ಧರ್ಮಗುರು ದಲೈಲಾಮಾ
ಟಿಬೆಟ್ ಧರ್ಮಗುರು ದಲೈಲಾಮಾ
ನವದೆಹಲಿ: ಭಾರತದಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಟಿಬೆಟ್ ಧರ್ಮಗುರು ದಲೈಲಾಮಾ ಮುಕ್ತರು ಎಂದು ಭಾರತ ಶುಕ್ರವಾರ ಸ್ಪಷ್ಟಪಡಿಸಿದೆ, 
ದಲೈಲಾಮಾ ಕಾರ್ಯಕ್ರಮಕ್ಕೆ ತೆರಳದಂತೆ ಸರ್ಕಾರ ಒತ್ತಡ ಹೇರುತ್ತಿದೆ ಎಂಬ ಕೆಲ ಮಾಧ್ಯಮಗಳ ವರದಿಗಳನ್ನು ತಿರಸ್ಕರಿಸಿರುವ ಕೇಂದ್ರ ಸರ್ಕಾರದ ವಕ್ತಾರರು, ಧಾರ್ಮಿಕ ಗುರು ದಲೈಲಾಮಾ ಭಾರತದ ಯಾವುದೇ ಭಾಗದಲ್ಲಿ ತಮ್ಮ ಧಾರ್ಮಿಕ ಚಟುವಟಿಕೆ ನಡೆಸಲು ಸ್ವತಂತ್ರರಾಗಿದ್ದಾರೆ ಎಂದು ಹೇಳಿದ್ದಾರೆ. 
ದಲೈಲಾಮಾ ಅವರ ಪವಿತ್ರತೆಯ ಬಗ್ಗೆ ಭಾರತ ಸರ್ಕಾರ ಸ್ಪಷ್ಟ ಹಾಗೂ ಸ್ಥಿರವಾಗಿದೆ. ದಲೈಲಾಮ್ ಪೂಜ್ಯ ಧಾರ್ಮಿಕ ನಾಯಕರಾಗಿದ್ದು, ಭಾರತದ ಜನತೆ ಅವರನ್ನು ಸಂಪೂರ್ಣವಾಗಿ ಗೌರವಿಸುತ್ತಾರೆ. ದಲೈಲಾಮಾ ಕುರಿತ ಸರ್ಕಾರದ ನಿಲುವಲ್ಲಿ ಯಾವುದೇ ಬದಲಾವಣೆಯಿಲ್ಲ. ಭಾರತದಲ್ಲಿ ಧಾರ್ಮಿಕ ಚಟುವಟಿಕೆ ನಡೆಸಲು ದಲೈಲಾಮಾ ಸಂಪೂರ್ಣ ಸ್ವತಂತ್ರರಾಗಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com