ಮೂಲಗಳ ಪ್ರಕಾರ ಇತ್ತ ಚೆನ್ನೈನಲ್ಲಿ ಕಾರ್ತಿ ಚಿದಂಬರಂ ಬಂಧನವಾದ ಬೆನ್ನಲ್ಲೇ ಅತ್ತ ಲಂಡನ್ ನಲ್ಲಿದ್ದ ಪಿ.ಚಿದಂಬರಂ ಅವರಿಗೆ ವಿಚಾರ ತಿಳಿದಿದ್ದು, ಕೂಡಲೇ ಅವರು ಭಾರತಕ್ಕೆ ವಾಪಸ್ ಆಗಿದ್ದಾರೆ. ಆಕ್ಸ್‌ಫರ್ಡ್ ವಿದ್ಯಾರ್ಥಿ ಸಂಘದ ಸಂವಾದದಲ್ಲಿ ಭಾಗವಹಿಸಲು ಲಂಡನ್‌ಗೆ ಹೋಗಿದ್ದ ಚಿದಂಬರಂ, ಮಗ ಕಾರ್ತಿ ಬಂಧನದ ಸುದ್ದಿ ತಿಳಿಯುತ್ತಲೇ ತಮ್ಮೆಲ್ಲ ಕಾರ್ಯಕ್ರಮ ರದ್ದುಪಡಿಸಿ ಭಾರತಕ್ಕೆ ಧಾವಿಸಿದ್ದಾರೆ. ಬಂಧನದ ಬಳಿಕ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ಮಗನನ್ನು ಭೇಟಿಯಾದ ಅವರು ‘ಚಿಂತೆ ಬೇಡ, ನಾನಿದ್ದೇನೆ’ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.