ಗಡಿಯಲ್ಲಿ ಮುಂದುವರೆದ ಪಾಕ್ ಪುಂಡಾಟ: 2 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ತನ್ನ ಪುಂಡಾಟವನ್ನು ಮುಂದುವರೆಸಿದ್ದು, ಈ ವೇಳೆ ನಡೆಸಲಾದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ತನ್ನ ಪುಂಡಾಟವನ್ನು ಮುಂದುವರೆಸಿದ್ದು, ಈ ವೇಳೆ ನಡೆಸಲಾದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯಾದ ರಜೌರಿಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸೇನಾಧಿಕಾರಿ, ರಜೌರಿ ಜಿಲ್ಲೆಯ ಭಿಂಬೆರ್ ಗಾಲಿ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನಾ ನೆಲೆಗಳು ಹಾಗೂ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು ಎಂದು ಹೇಳಿದ್ದಾರೆ. 
ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, ಈ ವೇಳೆ ಪಾಕಿಸ್ತಾನ ಸೇನಾ ನೆಲೆಗಳು ಹಾಗೂ ಬಂಕರ್ ಗಳು ನಾಶಗೊಂಡಿವೆ. ಅಲ್ಲದೆ, ಪಾಕಿಸ್ತಾನ ಯೋಧರು ಕೂಡ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. 
ತಮ್ಮ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆಂದು ಪಾಕಿಸ್ತಾನ ಕೂಡ ದೃಢಪಡಿಸಿದೆ. ಸಾವನ್ನಪ್ಪಿದ ಯೋಧರನ್ನು ಮುನೀರ್ ಛೊಹಾನ್ ಮತ್ತು ಅಮೀರ್ ಹುಸೇನ್ ಎಂದು ಗುರ್ತಿಸಲಾಗಿದೆ. 
ಭಿಂಬೆರ್ ಘಾಲಿ, ನೌಶೆರಾ, ಕಾಲಾ, ಸುಂದರ್'ಬನಿ ಮತ್ತು ರಜೌರಿ ಸೆಕ್ಟರ್ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com