ಚೆನ್ನೈ: ಅನಾರೋಗ್ಯದ ಕಾರಣ ನಿನ್ನೆ ಚೆನ್ನೈ ನ ಅಪಲೋ ಆಸ್ಪತ್ರೆಗೆ ದಾಖಲಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೂತ್ರ ಸಂಬಂಧಿತ ಕಾಯಿಲೆಯಿಂದಾಗಿ ಪಿಣರಾಯಿ ವಿಜಯನ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ತಪಾಸಣೆಯ ಬಳಿಕ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
73 ವರ್ಷದ ಪಿಣರಾಯಿ ಅವರು ನಿನ್ನೆ ರಾತ್ರಿ 11.55ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು, ಇದೊಂದು ದೈನಂದಿನ ಚೆಕ್ ಅಪ್ ಬಳಿಕ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.