ಇನ್ನು 59 ಸ್ಥಾನಗಳನ್ನು ಹೊಂದಿರುವ ಮೇಘಾಲಯದಲ್ಲಿ ಕಾಂಗ್ರೆಸ್ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎನ್ ಪಿಪಿ 15 ಮತ್ತು ಬಿಜೆಪಿ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ನಾಗಾಲ್ಯಾಂಡ್ ನ 60 ವಿಧಾನಸಭಾ ಕ್ಷೇತ್ರಗಳ ಪೈಕಿ, ಎನ್ ಪಿಎಫ್ ಮೈತ್ರಿಕೂಟ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎನ್ ಡಿಪಿಪಿ ಮೈತ್ರಿಕೂಟ 32 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.