2013ರಿಂದ ಪೋಲೀಸ್ ಇಲಾಖೆಯಲ್ಲಿ ಅರುಣ್ ರಾಜ್ ಸೇವೆ ಸಲ್ಲಿಸುತ್ತಿದ್ದರು. ಪೇದೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಎ.ಕೆ. ವಿಶ್ವನಾಥನ್ ಮತ್ತು ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.