ಸುಂಜುವಾನ್ ಉಗ್ರ ದಾಳಿಯ ರೂವಾರಿ ಹತ್ಯೆಗೈದ ಸೇನೆ

Published On :
ಶ್ರೀನಗರ: ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಸಂಜುವಾನ್ ನಲ್ಲಿ ನಡೆದ ಉಗ್ರ ದಾಳಿಯ ರೂವಾರಿಯನ್ನು ಭದ್ರತಾ ಪಡೆಗಳು ಸೋಮವಾರ ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಸೇನೆಯ ಒಂದು ಸಣ್ಣ ತುಕಡಿ ದಕ್ಷಿಣ ಕಾಶ್ಮೀರದ ಅವಂತಿಪೊರಾ ಅತ್ವಾ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಸಂಜುವಾನ್ ದಾಳಿಯ ಸೂತ್ರಧಾರ ಜೈಶ್ ಎ ಮೊಹಮ್ಮದ್ ಉಗ್ರ ಮುಫ್ತಿ ವಖಾರ್ ನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.
ದಕ್ಷಿಣ ಕಾಶ್ಮೀರದ ಲೆಟ್ಪೋರಾ ಸಿಆರ್ ಪಿಎಫ್ ಕ್ಯಾಂಪ್ ಮೇಲಿನ ದಾಳಿ ಹಾಗೂ ಸಂಜುವಾನ್ ಸೇನಾ ಕ್ಯಾಂಪ್ ದಾಳಿಯ ರೂವಾರಿ ವಖಾರ್ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾನೆ. ಕಾರ್ಯಾಚರಣೆ ವೇಳೆ ಯಾವುದೇ ಯೋಧರು ಅಥವಾ ನಾಗರಿಕರ ಪ್ರಾಣಹಾನಿಯಾಗಿಲ್ಲ ಎಂದು ಸೇನೆ ಹೇಳಿದೆ.
ಫೆಬ್ರವರಿ 10ರಂದು ಜಮ್ಮು ಮತ್ತು ಕಾಶ್ಮೀರದ ಸುಂಜುವಾನ್ ಸೇನಾ ನೆಲೆಗಳ ಮೇಲೆ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


