
ದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನ 11 ,400 ಕೋಟಿ ರೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಕೇಸ್ ವಿರುದ್ಧ ಅಭರಣ ಉದ್ಯಮಿ ನೀರವ್ ಮೋದಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೇ , ಸರ್ಚ್ ವಾರೆಂಟ್ ಕಾಫಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ಪೂರೈಸುವಂತೆ ಹಣಕಾಸು ಸಚಿವಾಲಯ ಹಾಗೂ ಇಡಿಗೆ ನಿರ್ದೇಶನ ನೀಡುವಂತೆ ನೀರವ್ ಮೋದಿ ಕೇಳಿಕೊಂಡಿದ್ದಾನೆ.
ಈ ಪ್ರಕರಣ ಬೆಳಕಿಗೆ ಬಂದ ನಂತರ ನೀರವ್ ಮೋದಿ ಹಾಗೂ ಆತನ ಸಂಬಂಧಿ ಮೆಹುಲ್ ಚೋಕ್ಸಿ ವಿರುದ್ಧ ತನಿಖಾ ಸಂಸ್ಥೆಗಳಿಂದ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿತ್ತು
ಸಿಬಿಐ ದಾಖಲಿಸಿರುವ ಎಫ್ ಐಆರ್ ಆಧಾರದ ಮೇಲೆ ನೀರವ್ ಮೋದಿ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಕೇಸ್ ದಾಖಲಿಸಿತ್ತು. ಬಳಿಕ ಆತನಿಗೆ ಸೇರಿದ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ಹಾಗೂ ಆಭರಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು.
Advertisement