ಜಾರಿ ನಿರ್ದೇಶನಾಲಯದ ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಕಾರ್ತಿ ಚಿದಂಬರಂ ಅರ್ಜಿ ವಜಾ!

ಐಎನ್ಎಕ್ಸ್ ಮೀಡಿಯಾ ಸಂಸ್ಥೆಯಿಂದ ಲಂಚ ಪಡೆದಿರುವ ಆರೋಪದಲ್ಲಿ ಈಗಾಗಲೇ ಸಿಬಿಐ ನಿಂದ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಗೆ ಜಾರಿ ನಿರ್ದೇಶನಾಲಯದ ಬಂಧನದಿಂದ ರಕ್ಷಣೆ ನೀಡಲು..
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ
Updated on: 
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಸಂಸ್ಥೆಯಿಂದ ಲಂಚ ಪಡೆದಿರುವ ಆರೋಪದಲ್ಲಿ ಈಗಾಗಲೇ ಸಿಬಿಐ ನಿಂದ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಗೆ ಜಾರಿ ನಿರ್ದೇಶನಾಲಯದ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 
ಜಾರಿ ನಿರ್ದೇಶನಾಲಯದ ಬಂಧನದಿಂದ ರಕ್ಷಣೆ ನೀಡಬೇಕೆಂದು ಕೋರಿ ಕಾರ್ತಿ ಚಿದಂಬರಂ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಇಡಿ ಪ್ರತಿಕ್ರಿಯೆ ಕೇಳಿರುವ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಮಾ.08 ಕ್ಕೆ ಮುಂದೂಡಿದೆ. 
ಇನ್ನು ಕಾರ್ತಿ ಚಿದಂಬರಂ ನ ಕಸ್ಟಡಿಯನ್ನು ವಿಸ್ತರಣೆ ಮಾಡುವುದಕ್ಕೆ ಮನವಿ ಸಲ್ಲಿಸುವುದಾಗಿ ಸುಪ್ರೀಂ ಕೋರ್ಟ್ ಗೆ ಸಿಬಿಐ ಹೇಳಿದೆ.  ಕಾರ್ತಿ ಚಿದಂಬರಂ ಪರ ವಾದ ಮಂಡಿಸಿರುವ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, "ಪ್ರಕರಣದ ತನಿಖೆಗೆ ಸಹಕರಿಸಲು ನನ್ನ ಕಕ್ಷಿದಾರರು ಸಿದ್ಧರಿದ್ದಾರೆ ಹಾಗೂ ಈ ಹಿಂದೆಯೂ ಸಹಕರಿಸಿದ್ದಾರೆ ಎಂದು ಹೇಳಿದ್ದಾರೆ. 
ಪ್ರಭಾವಶಾಲಿ ರಾಜಕಾರಣಿಯ ಬ್ಯಾಂಕ್ ಖಾತೆಗೆ ಕಾರ್ತಿ ಚಿದಂಬರಂ 1.8 ಕೋಟಿ ರೂಪಾಯಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಇದಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಸಮನ್ಸ್ ನ್ನು ರದ್ದುಗೊಳಿಸಬೇಕೆಂದು ಕಾರ್ತಿ ಚಿದಂಬರಂ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು. ಇದಾದ ಬಳಿಕ ಈಗ ಇಡಿ ಬಂಧನದಿಂದ ತಮಗೆ ರಕ್ಷಣೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com