ನೀಟ್, ಎಂಬಿಬಿಎಸ್, ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ ಸೇರಿದಂತೆ ಸಿಬಿಎಸ್ಇ ನಡೆಸುವ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯ ಮಾಡಿ ಮಂಡಳಿ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಗುಜರಾತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.ಆದರೆ ಅದನ್ನು ಫೆ. 27ರಂದು ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು.