ರಾಜ್ಯಕ್ಕೆ ವಿಶೇಷ ಸ್ಥಾನಮಾನ ಸಿಗುವವರೆಗೂ ಪ್ರತಿಭಟನೆ ಮುಂದುವರೆಸಿ: ಸಂಸದರಿಗೆ ಆಂಧ್ರ ಸಿಎಂ

ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವವರೆಗೂ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ) ಸಂಸದರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಬುಧವಾರ ಸೂಚನೆ ನೀಡಿದ್ದಾರೆ...
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
Updated on: 
ಅಮರಾವತಿ: ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವವರೆಗೂ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ) ಸಂಸದರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಬುಧವಾರ ಸೂಚನೆ ನೀಡಿದ್ದಾರೆ. 
ಟೆಲಿಕಾನ್ಫರೆನ್ಸ್ ಮೂಲಕ ಸಂಸದರೊಂದಿಗೆ ಮಾತುಕತೆ ನಡೆಸಿರುವ ನಾಯ್ಡು ಅವರು, ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದನ್ನು ಸೇರಿದಂತೆ ರಾಜ್ಯಸಭೆಯಲ್ಲಿ ನೀಡಿದ್ದ ಭರವಸೆಗಳನ್ನು ಕೇಂದ್ರ ಸರ್ಕಾರ ಪೂರೈಸಬೇಕು. ಕೇಂದ್ರ ಸರ್ಕಾರ ಭರವಸೆಗಳನ್ನು ಈಡೇರಿಸುವವರೆಗೂ ಸಂಸತ್ತಿನಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಆಂಧ್ರಪ್ರದೇಶ ರಾಜ್ಯಕ್ಕೆ ವಿತ್ತ ಸಚಿವ ಅರುಣ್ ಜೇಟ್ಲಿಯವರು ನೀಡಿಲುವ ಅನುದಾನಗಳ ಅಂಕಿಅಂಶಗಳನ್ನು ವಿವರಿಸಿರುವ ಅವರು, ನಮ್ಮ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸರಿಯಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com