ತ್ರಿಪುರಾದಲ್ಲಿ ಬಿಜೆಪಿ ಕಾರ್ಯಕರ್ತರು ಲೆನಿನ್ ಪ್ರತಿಮೆಯನ್ನು ಕೆಡಲಿ ಹಾಕಿದ ಬೆನ್ನಲ್ಲೇ, ತಮಿಳುನಾಡಿನಲ್ಲಿ ಪೆರಿಯಾರ್ ಪುತ್ಥಳಿಗೆ ಹಾನಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೋಲ್ಕತಾದ ಕಾಳಿಘಾಟ್ ನಲ್ಲಿ ಬಿಜೆಪಿ ಮುಖಂಡರಾಗಿದ್ದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುತ್ಥಳಿಗೆ ಕಪ್ಪು ಬಣ್ಣ ಬಳಿಯಲಾಗಿತ್ತು. ಈ ಎಲ್ಲ ಪ್ರಕರಣಗಳ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.