ಜಮ್ಮು-ಕಾಶ್ಮೀರ: ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳ ಕರೆ- ಶ್ರೀನಗರದ ಹಲವೆಡೆ ನಿರ್ಬಂಧ

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪ್ರತಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಶ್ರೀನಗರದ ಹಲವೆಡೆ ಬುಧವಾರ ನಿರ್ಬಂಧ ಹೇರಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪ್ರತಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಶ್ರೀನಗರದ ಹಲವೆಡೆ ಬುಧವಾರ ನಿರ್ಬಂಧ ಹೇರಿದ್ದಾರೆ. 
ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾನುವಾರ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹಾಗೂ ನಾಲ್ವರು ನಾಗರೀಕರು ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಪ್ರತ್ಯೇಕತಾವಾದಿಗಳು ಇಂದು ಕಾಶ್ಮೀರದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದರು. 
ಪ್ರತ್ಯೇಕತಾವಾದಿಗಳ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಕಾಶ್ಮೀರದ ಹಲವೆಡೆ ಅಧಿಕಾರಿಗಳು ನಿರ್ಬಂಧ ಹೇರಿದ್ದು, ಸೆಕ್ಷನ್ 144 ಜಾರಿ ಮಾಡಿದ್ದಾರೆ. 
ನಿರ್ಬಂಧ ಹೇರಿರುವ ಹಿನ್ನಲೆಯಲ್ಲಿ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಅವರನ್ನು ಶ್ರೀನಗರ ಕೇಂದ್ರೀಯ ಕಾರಾಗೃಹ ಹಾಗೂ ಗಿಲಾನಿ ಮತ್ತು ಉಮರ್ ಫರೂಖ್ ಅವರಿಗೆ ಗೃಹ ಬಂಧನದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ. 
ಶಾಲೆ, ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳೂ ಕೂಡ ಬಂದ್ ಆಗಿದ್ದು, ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಧಇಕಾರಿಗಳು ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಸಾರಿಗೆ ಸಂಪರ್ಕಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ನಿರ್ಬಂಧಿತ ಸ್ಥಳಗಳಲ್ಲಿ ಖಾಸಗಿ ಸಾರಿಗೆ ಸೇವೆಗಳೂ ಕೂಡ ಬಂದ್ ಆಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com