ನೀಟ್ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಮಾ.12 ರವರೆಗೆ ಅವಕಾಶ: ಸು. ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಿದ ಸಿಬಿಎಸ್ಇ
ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯ ಕಡೆಯ ದಿನಾಂಕವನ್ನು ಮಾ.12 ರವರೆಗೆ ವಿಸ್ತರಿಸಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಇಂದು ಆದೇಶ ಹೊರಡಿಸಿದೆ.
ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯ ಕಡೆಯ ದಿನಾಂಕವನ್ನು ಮಾ.12 ರವರೆಗೆ ವಿಸ್ತರಿಸಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಆದೇಶ ಹೊರಡಿಸಿದೆ.
ಈ ಹಿಂದೆ ನೀಡಿದ್ದ ಆದೇಶದಂತೆ ನೀಟ್ ಗೆ ನೊಂದಾಯಿಸಲು ಇಂದು ಕಡೆಯ ದಿನಾಂಕವಾಗಿತ್ತು.
ನೀಟ್ ಪರೀಕ್ಷೆಗಾಗಿ ಆಧಾರ್ ಕಡ್ಡಾಯಗೊಳಿಸಿ ಸಿಬಿಎಸ್ಇ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿಯೊಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಂದಿದ್ದು ಕೋರ್ಟ್ ನೀಟ್ ಸೇರಿದಂತೆ ಯಾವ ಪರೀಕ್ಷೆಗಳಿಗೂ ಆಧಾರ್ ಕಡ್ಡಾಯವಾಲ್ಲ ಎಂದು ತೀರ್ಪು ನೀಡಿತ್ತು. ಈ ತೀರ್ಪಿನ ಹಿನ್ನೆಲೆಯಲ್ಲಿ ಸಿಬಿಎಸ್ಇ ಪರಿಕ್ಷಾ ನೊಂದಣಿ ಕಡೆಯ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಮಾಡಿದೆ.
ಮಾ. 12, 2018 ಸಂಜೆ 5.30ರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ. ಹಾಗೆಯೇ ಮಾ. 13, ಬೆಳಿಗ್ಗೆ 11.50ರ ವರೆಗೆ ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಲು ಅವಕಾಶ ನಿಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.