ಲವ್ ಜಿಹಾದ್ ಪ್ರಕರಣ: ವಿವಾಹ ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಫೀನ್ ಜಹಾನ್ ಜೊತೆಗಿನ ಹಾದಿಯಾ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on
ನವದೆಹಲಿ: ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಫೀನ್ ಜಹಾನ್ ಜೊತೆಗಿನ ಹಾದಿಯಾ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 
ಶಫೀನ್ ಜಹಾನ್ ಜೊತೆಗಿನ ವಿವಾಹವನ್ನು ರದ್ದುಗೊಳಿಸಿ ತನ್ನನ್ನು ಪೋಷಕರ ವಶಕ್ಕೆ ನೀಡಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಈ ಹಿಂದೆ ಹಾದಿಯಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಳು. 
ಇದರಂತೆ ಇಂದು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತು ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್, ಡಿವೈ. ಚಂದ್ರಚೂಡ್ ಅವರಿದ್ದ ಪೀಠ, ಹಾದಿಯಾ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com