ಅಂತರಾಷ್ಟ್ರೀಯ ಮಹಿಳಾ ದಿನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಶುಭಾಶಯ

ವಿಶ್ವದಾದ್ಯಂತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ...
ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ
ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ವಿಶ್ವದಾದ್ಯಂತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟ್ಚರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ದೇಶದ ಹಾಗೂ ಎಲ್ಲಾ ಮಹಿಳೆಯರಿಗೆ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ. 
ಮಹಿಳೆಯರು ಅವರ ಕುಟುಂಬಕ್ಕೆ ಹಾಗೂ ದೇಶಕ್ಕೆ ಸ್ಫೂರ್ತಿಯಾಗಿದ್ದು, ಸಮಾಜಕ್ಕೆ ಸ್ಥಿರತೆಯನ್ನು ನೀಡುತ್ತಿದ್ದಾರೆ. ಭವಿಷ್ಯದಲ್ಲಿ ಪ್ರತೀ ಮಹಿಳೆಯ ಕನಸು ಪೂರ್ಣಗೊಳಿಸುವತ್ತ ಕೆಲಸ ಮಾಡೋಣ ಎಂದು ಹೇಳಿದ್ದಾರೆ. 
ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಟ್ವಿಟ್ಟರ್ ನಲ್ಲಿ ಮಹಿಳೆಯರಿಗೆ ಶುಭಾಶಯಗಳನ್ನು ಕೋರಿದ್ದು, ಭಾರತದ ಮಹಿಳೆಯರ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗುತ್ತಿದೆ. ನವ ಭಾರತದ ನಿರ್ಮಾಣದಲ್ಲಿ ಮಹಿಳೆಯರೂ ಮುನ್ನಡೆಯುತ್ತಿದ್ದಾರೆಂದು ಹೇಳಿದ್ದಾರೆ. 
ಇದೇ ವೇಳೆ ಸ್ವಚ್ಛ ಭಾರತದ ದಿನದ ಹಿನ್ನೆಲೆಯಲ್ಲಿ ತನ್ನ ಕುರಿಗಳನ್ನು ಮಾರಿ ಊರಿಗೆ ಶೌಚಾಲಯಗಳನ್ನು ಕಟ್ಟಿಸಿದ 105 ವರ್ಷದ ಛತ್ತೀಸ್ಗಢದ ಕುನ್ವಾರ್ ಭಾಯ್ ಅವರನ್ನು ಇದೇ ವೇಳೆ ಉದಾಹರಣೆ ನೀಡಿದ್ದಾರೆ. ಇದಲ್ಲದೆ, ಶಿ ಇನ್ಸ್ಪೈರ್ಸ್ ಮಿ ಎಂಬ ಹ್ಯಾಶ್ ಟ್ಯಾಗ್ ನ್ನು ಮೋದಿಯವರು ನೀಡಿದ್ದು, ಈ ಹ್ಯಾಶ್ ಟ್ಯಾಗ್ ಇದೀಗ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದೆ. ಇದೇ ವೇಳೆ ತಮಗೆ ಸ್ಪೂರ್ತಿಯಾದ ಮಹಿಳೆಯರ ಬಗ್ಗೆ ಬರೆಯುವಂತೆ ಜನತೆಗೆ ಕರೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com