ಮನುಷ್ಯ ಗೌರವಯುತವಾಗಿ ಸಾಯುವ ಹಕ್ಕು ಹೊಂದಿದ್ದಾನೆ: ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ 'ಸುಪ್ರೀಂ' ಅನುಮತಿ

ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ. 
ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಯಾವಾಗ ಕೊನೆಯುಸಿರೆಳೆಬೇಕೆಂದು ನಿರ್ಧರಿಸುವ ಹಕ್ಕಿರುತ್ತದೆ.  ಮನುಷ್ಯ ಗೌರವಯುತವಾಗಿ ಸಾಯುವ ಹಕ್ಕು ಹೊಂದಿದ್ದು, ಆತನಿಗೆ ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಅನುಮತಿ ನೀಡಬಹುದು ಎಂದು ಸುಪ್ರೀಂಕೋರ್ಟ್'ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಂವಿಧಾನಿಕ ನ್ಯಾಯಪೀಠ ಹೇಳಿದೆ, ಅಲ್ಲಗೆ, ದಯಾಮರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳ ಅನ್ವಯ ಕಾನೂನು ರೂಪಿಸವಂತೆಯೂ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 
ಪುನಶ್ಚೇತನಗೊಳ್ಳುವ ಯಾವುದೇ ಸಾಧ್ಯತೆಗಳು ಇಲ್ಲದ ಪರಿಸ್ಥಿತಿಯಿದ್ದಾಗ, ಬದುಕಿರಲು ಇಚ್ಛಿಸದ ವ್ಯಕ್ತಿಗೆ ಸಂಕಷ್ಟದಲ್ಲಿ ಜೀವನ ಮುಂದುವರಿಸುವ ಸ್ಥಿತಿ ಇರಬಾರದು. ಒಂದು ವೇಳೆ ವ್ಯಕ್ತಿ ಅಥವಾ ರೋಗಿಯು ತಾನು ಭವಿಷ್ಯದಲ್ಲಿ ಕೋಮಾ ಸ್ಥಿತಿಗೆ ತಲುಪಿದರೆ ಜೀವರಕ್ಷಕದ ಸಹಾಯದಿಂದ ಬದುಕಿಸದಿರಿ ಎಂದು ಲಿವಿಂಗ್ ವಿಲ್ ಬರೆಯಲು ನ್ಯಾಯಾಲಯದ ಇದೇ ವೇಳೆ ಅನುಮತಿ ನೀಡಿದೆ. 
2008ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಕಾಮನ್ ಕಾಸ್ ಸರ್ಕಾರೇತರ ಸಂಘಟನೆಯು, ಭೀಕರ ಕಾಯಿಲೆಗೆ ತುತ್ತಾಗಿ ಚೇತರಿಕೆ ಅಸಾಧ್ಯ ಎಂಬ ಸ್ಥಿತಿಗೆ ತಲುಪಿದ ರೋಗಿಗೆ ಜೀವ ರಕ್ಷಕ ವೈದ್ಯಕೀಯ ಸವಲತ್ತು ನಿರಾಕರಿಸುವ ಹಕ್ಕನ್ನು ನೀಡಬೇಕು. ಇಲ್ಲದೇ ಇದ್ದಲ್ಲಿ ಆತನ ವೇದನೆಯನ್ನು ಸುದೀರ್ಘಗೊಳಿಸುತ್ತೆ ಎಂದು ವಾದಿಸಿತ್ತು. 

ಕೃತಕ ಜೀವರಕ್ಷದ ವೈದ್ಯಕೀಯ ನೆರವು ಮುಂದುವರೆಸಬಾರದು ಎಂಬ ಕೋರಿಕೆಯನ್ನು ವಿರೋಧಿಸಿದ್ದ ಕೇಂದ್ರ ಸರ್ಕಾರವು ಇದನ್ನು ಆತ್ಮಹತ್ಯೆಗೆ ಸಮ ಎಂದು ವಾದಿಸಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂಕೆ ಸುಪ್ರೀಂಕೋರ್ಟ್ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕಾನೂನು ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿತ್ತು. 

ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಅವರು, ಕೃತಕ ಜೀವರಕ್ಷಕ ವೈದ್ಯಕೀಯ ಸವಲತ್ತುಗಳ ಮೂಲಕ ಸಾವಿನ ಸನಿಹದಲ್ಲಿರುವ ವ್ಯಕ್ತಿಯ ಜೀವ ರಕ್ಷಿಸುವ ಯತ್ನ ವ್ಯಕ್ತಿಯ ಸಹಜ ಆಯಸ್ಸನ್ನು ಅಸಹಜ ರೀತಿಯಲ್ಲಿ ವೃದ್ಧಿಸುವ ಕ್ರಮವಾಗುತ್ತದೆ ಎಂದು ವಾದ ಮಾಡಿಸಿದ್ದರು. 

ದಶಕಗಳ ಕಾಲ ಮರಣಶಯ್ಯೆಯಲ್ಲಿದ್ದ ಕರ್ನಾಟಕ ಮೂಲಕ ಶುಶ್ರೂಷಕಿ ಮತ್ತು ಮುಂಬೈ ನಿವಾಸಿ ಅರುಣಾ ಶಾನುಭಾಗ್ ಅವರು ದಯಾಮರಣ ಕೋರಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, 2011ರಲ್ಲಿ ಸುಪ್ರೀಂಕೋರ್ಟ್ ಅರುಣಾ ಅವರ ದಯಾಮರಣ ಬೇಡಿಕೆಯನ್ನು ನಿರಾಕರಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com