ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಎಎಪಿ ಶಾಸಕ ಪ್ರಕಾಶ್ ಜರ್ವಾಲ್ ಗೆ ಜಾಮೀನು

ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಪ್ರಕಾಶ್ ಜರ್ವಾಲ್ ಅವರಿಗೆ ದೆಹಲಿ ಹೈಕೋರ್ಟ್ ...
ಅಂಶು ಪ್ರಕಾಶ್
ಅಂಶು ಪ್ರಕಾಶ್
ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಎಪಿ ಶಾಸಕ ಪ್ರಕಾಶ್ ಜರ್ವಾಲ್ ಅವರಿಗೆ  ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ  ಸರ್ಕಾರದ ಮುಖ್ಯ ಕಾರ್ಯದರ್ಶಿ  ಅಂಶು ಪ್ರಕಾಶ್ ಅವರ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದರು. ಈ ಸಂಬಂಧ ಫೆಬ್ರವರಿ 20 ರಂದು ಶಾಸಕ ಪ್ರಕಾಶ್ ಜರ್ವಾಲ್ ಅವರನ್ನು ಬಂಧಿಸಲಾಗಿತ್ತು.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಜಾಮೀನು ನೀಡಿದ್ದಾರೆ. ಈ ಮೊದಲು ಜಾಮೀನು ಅರ್ಜಿಯನ್ನು ಮೀಸಲಿರಿಸಲಾಗಿತ್ತು,  ರಾಜ್ಯದಲ್ಲಿ  ಅಧಿಕಾರಿಗಳಿಗೆ ಭದ್ರತೆ ಇಲ್ಲ ಎಂದು ವಾದಿಸಲಾಗಿತ್ತು, ಇನ್ನೂ ಹಲ್ಲೆ ನಡೆಸಿದ್ದ ಮತ್ತೊಬ್ಬ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಫೆಬ್ರವರಿ 21 ರಂದು ಬಂಧಿಸಲಾಗಿತ್ತು, 
ಅಮಾನತುಲ್ಲಾಖಾನ್ ಅವರ ಜಾಮೀನು ಅರ್ಜಿಯನ್ನು  ನ್ಯಾಯಾಲಯ ಪೆಂಡಿಂಗ್ ಇರಿಸಿದೆ.ಈ ಮೊದಲು ಸ್ಥಳೀಯ ನ್ಯಾಯಾಲಯ ಅವರಿಗೆ ಜಾಮೀನು ನಿರಾಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com