ಮುಂದಿನ ವಿಚಾರಣೆವರೆಗೂ ಕಾರ್ತಿ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸುವಂತಿಲ್ಲ ಎಂದು ಕೋರ್ಟ್ ನಿರ್ದೇಶನ ನೀಡಿದೆ. ಹಣ ಅಕ್ರಮ ವರ್ಗಾವಣೆ ಸಂಬಂಧ ಕಳೆದ ವಾರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು, ಮಾರ್ಚ್ 9 ರವರೆಗೂ ಸಿಬಿಐ ಕಸ್ಟಡಿಗೆ ತೆಗೆದುಕೊಂಡಿತ್ತು, ಇಂದು ಕಾರ್ತಿ ಚಿದಂಬರಂ ಸಿಬಿಐ ಕಸ್ಟಡಿ ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 20 ರವರೆಗೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸುವಂತಿಲ್ಲ ಎಂದು ತಿಳಿಸಿದೆ,