ಭಾರತ ಪ್ರವಾಸದಲ್ಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್ ಮತ್ತು ಅವರ ತಂಡ ಭಾರತದೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದ್ದು, ಇದಕ್ಕೂ ಮೊದಲೇ ಫ್ರಾನ್ಸ್ ರಕ್ಷಣಾ ಕಾರ್ಯದರ್ಶಿ ಫ್ಲಾರೆನ್ಸ್ ಪಾರ್ಲೆ ಅವರು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇಂದು ನಡೆದ ಫ್ರಾನ್ಸ್ ಮತ್ತು ಭಾರತ ಮುಖಂಡರ ಜಂಟಿ ಹೇಳಿಕೆಯಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲವಾದರೂ ಫ್ರಾನ್ಸ್ ಅಧಿಕಾರಿಗಳು ಮಾತ್ರ ಭಾರತದೊಂದಿಗೆ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಆದರೆ ಭಾರತ ಮಾತ್ರ ಇದಕ್ಕೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.