ಇಂದು ಮ್ಯಾಕ್ರೋನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಬೇಟಿ ಮಾಡಲಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಂತೆಯೇ ಉಭಯ ದೇಶಗಳ ನಾಯಕರುರಕ್ಷಣೆ, ಬಾಹ್ಯಾಕಾಶ, ಪರಮಾಣು ಸಹಕಾರ, ವ್ಯಾಪಾರ-ವಹಿವಾಟು ಸೇರಿದಂತೆ ವಿವಿಧ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ.