ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಲು ಸಾಧ್ಯವಿಲ್ಲ: ಆರ್ ಎಸ್ಎಸ್

ಲಿಂಗಾಯುತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನ ಮಾನ ನೀಡಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನಾಗಪುರ: ಲಿಂಗಾಯುತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನ ಮಾನ ನೀಡಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಹೇಳಿದೆ.
ಭಾನುವಾರ ನಾಗಪುರದಲ್ಲಿ ಈ ಬಗ್ಗೆ ಮಾತನಾಡಿದ ಆರ್ ಎಸ್ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭಾಯ್ಯಾಜಿ ಜೋಶಿ ಅವರು, ಲಿಂಗಾಯುತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವುದಕ್ಕೆ ನಮ್ಮ ವಿರೋಧವಿದೆ. ಲಿಂಗಾಯುತ ಮತ್ತು ವೀರಶೈವ ಒಂದೇ ಆಗಿದ್ದು, ಲಿಂಗಾಯುತ ಧರ್ಮಕ್ಕೆ ಪ್ರತ್ಯೇಕ ಧರ್ಮ ಸ್ಥಾನ ಮಾನ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ನಿನ್ನೆಯಷ್ಟೇ ಜಾಗತಿಕ ಲಿಂಗಾಯುತ ಮಹಾಸಭಾ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕೆ ಆಗ್ರಹಿಸಿ ಅನಿರ್ಧಾಷ್ಟವಾದಿ ಪ್ರತಿಭಟನೆ ಆರಂಭಿಸಿದ್ದು, ರಾಜ್ಯ ಸರ್ಕಾರ ತನ್ನ ಶಿಫಾರಸ್ಸನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಬೇಕು ಎಂದು ಆಗ್ರಹಿಸಿದೆ. ಲಿಂಗಾಯುತ ಸಮುದಾಯವನ್ನು ಧಾರ್ಮಿಕ ಅಲ್ಪ ಸಂಖ್ಯಾತರು ಎಂದು ಗುರುತಿಸಬೇಕು ಎಂದು ಆಗ್ರಹಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com