ರಾಹುಲ್ ನಕಾರಾತ್ಮಕ ಮನಸ್ಥಿತಿ ಹೊಂದಿದ್ದು, ಅವರ ಮನವಿಯನ್ನು ಜನರು ಕಿತ್ತೆಸೆಯುತ್ತಾರೆ: ಸಿಎಂ ಯೋಗಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಋಣಾತ್ಮಕ ಮನಸ್ಥಿತಿಯೊಂದಿಗೆ ಕೆಲಸ ಮಾಡುತ್ತಿದ್ದು, ಅವರ ಮನವಿಯನ್ನು ಜನರು ಕಿತ್ತೆಸೆಯುತ್ತಾರೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ...
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Updated on: 
ಲಖನೌ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಋಣಾತ್ಮಕ ಮನಸ್ಥಿತಿಯೊಂದಿಗೆ ಕೆಲಸ ಮಾಡುತ್ತಿದ್ದು, ಅವರ ಮನವಿಯನ್ನು ಜನರು ಕಿತ್ತೆಸೆಯುತ್ತಾರೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ. 
ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳು ಹಾಗೂ ಬಿಹಾರದ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ಇದರಂತೆ ಗೋರಖ್ ಪುರದಲ್ಲಿ ಸಿಎಂ ಯೋಗಿ ಆದಿತ್ಯನಾಥ ಅವರು ಇಂದು ಮತಗಟ್ಟೆಗೆ ಬಂದು ಮತದಾನ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಹುಲ್ ಗಾಂಧಿಯವರು ನಕಾರಾತ್ಮಕ ಮನಸ್ಥಿತಿಯೊಂದಿಗೆ ಕೆಲಸ ಮಾಡುತ್ತಿದ್ದು, ಅವರು ಹೋದಲ್ಲೆಲ್ಲಾ ಕಾಂಗ್ರೆಸ್ ದುರ್ಬಲಗೊಳ್ಳುತ್ತದೆ ಎಂದು ಹೇಳಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿವೃದ್ಧಿ ಆಧಾರದ ಮೇಲೆ ಗೋರಖ್ಪುರ ಹಾಗೂ ಫುಲ್ಪುರದಲ್ಲಿ ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ. 2019ರ ಚುನಾವಣೆ ಕೂಡ ಬಿಜೆಪಿಗೆ ಉತ್ತಮವಾಗಿರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com