ಉ.ಪ್ರದೇಶ, ಬಿಹಾರ ಲೋಕಸಭಾ ಉಪಚುನಾವಣೆ: ಮತ ಚಲಾಯಿಸಿದ ಸಿಎಂ ಯೋಗಿ

ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳು ಹಾಗೂ ಬಿಹಾರದ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಆರಂಭವಾಗಿದೆ...
ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ
ನವದೆಹಲಿ: ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳು ಹಾಗೂ ಬಿಹಾರದ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಆರಂಭವಾಗಿದೆ. 
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರತಿನಿಧಿಸಿದ್ದ ಗೋರಖ್ ಪುರ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಫುಲ್ಪುರ್ ಹಾಗೂ ಆರ್ ಜೆಡಿ ಸಂಸದ ಮೊಹಮ್ಮದ್ ತಸ್ಲೀಮುದ್ದಿನ್ ಅವರ ಅಕಾಲಿಕ ನಿಧನದಿಂದಾಗಿ ಬಿಹಾರದ ಆರಾರಿಯಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. 
ಇನ್ನು ಗೋರಖ್ ಪುರದಲ್ಲಿ ಸಿಎಂ ಯೋಗಿ ಆದಿತ್ಯನಾಥ ಹಾಗೂ ಫುಲ್ಪುರದಲ್ಲಿ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಬೆಳಗ್ಗೆ ಮತಗಟ್ಟೆಗೆ ಬಂದು ಮತದಾನ ಚಲಾಯಿಸಿದರು. 
ಈ ಮೂರು ಕ್ಷೇತ್ರಗಳ ಚುನಾವಣಾ ಫಲಿತಾಂಶ ಮಾರ್ಚ್ 14ರಂದು ಹೊರ ಬೀಳಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com