ಮುಂಬೈ: ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ರೈತರ ಬೃಹತ್ ಪ್ರತಿಭಟನೆ ಅಂತ್ಯವಾಗಿದೆ.
ಪ್ರತಿಭಟನಾಕಾರರಿಗೆ ಮಣಿದ ಮಹಾರಾಷ್ಟ್ರ ಸರ್ಕಾರ ರೈತರ ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
#WATCH Maharashtra CM speaks in the state assembly on farmers' march, says, 'We're positive towards fulfilling their demands.Since 1st day of Morcha we tried to discuss issues with them. Girish Mahajan was in touch with them from day 1. But they were firm on taking out the march' pic.twitter.com/zE8Ut79dRB
ಆಜಾದ್ ಮೈದಾನದಲ್ಲಿ ಸೇರಿದ್ದ ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಹಾರಾಷ್ಟ್ರದ ಕಂದಾಯ ಸಚಿವ ಚಂದ್ರಕಾತ್ ಪಾಟೀಲ್ ಮಾತನಾಡಿದ್ದು ಸರ್ಕಾರ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡಿದ್ದಾರೆ.
ರೈತರ ಹೆಸರಿಗೆ ಅರಣ್ಯ ಭೂಮಿ ಹಂಚಿಕೆ ಪ್ರಕ್ರಿಕೆ ಪೂರ್ಣಗೊಳಿಸುವುದಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಸಚಿವ ಪಾಟೀಲ್ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಲಿಖಿತ ಸಂದೇಶ ಜತೆಗೆ ಸಚಿವರ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಹಿಂದೆ ತೆಗೆದುಕೊಂಡಿದ್ದಾರೆ.