ನವದೆಹಲಿ: ಸಮಾಜವಾದಿ ಪಕ್ಷದ ಹಿರಿಯ ಮುಖಂಡ ನರೇಶ್ ಅಗರ್ವಾಲ್ ಇಂದು ಬಿಜೆಪಿ ಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯಸಭೆ ಟಿಕೆಟ್ ಸಿಕ್ಕದ ಹಿನ್ನೆಲೆಯಲ್ಲಿ ಅವರು ಪಕ್ಷ ತೊರೆದಿದ್ದಾಗಿ ಹೇಳಳಾಗಿದೆ.
ಅಗರ್ವಾಲ್ ಬಿಜೆಪಿ ಸೇರ್ಪಡೆ ವಿಚಾರವನ್ನು ಹಿರಿಯ ಬಿಜೆಪಿ ಮುಖಂಡ ಪಿಯೂಷ್ ಗೋಯಲ್ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಘೊಷಿಸಿದ್ದಾರೆ.
ಉತ್ತರ ಪ್ರದೇಶದ ಹಾರ್ದೋಯಿ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿದ್ದ ಅಗರ್ವಾಲ್ ಅವರ ನಿರ್ಗಮನ ಅಖಿಲೇಶ್ ಯಾದವ್ ಪಕ್ಷಕ್ಕೆ ದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ.
ಕಳೆದ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸೋತು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು..