ನೇಪಾಳ ವಿಮಾನ ದುರಂತ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಂತಾಪ
ನೇಪಾಳ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ...
ನವೆದಹಲಿ: ನೇಪಾಳ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಷ್ಮಾ ಸ್ವರಾಜ್ ಅವರು ಬಾಂಗ್ಲಾದೇಶ ವಿದೇಶಾಂಗ ಸಚಿವೆ ಅಬುಲ್ ಹಸ್ಸನ್ ಮಹ್ಮುದ್ ಅಲಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ವೇಳೆ ದುರ್ಘಟನೆಗೆ ಸಂತಾಪ ಸೂಚಿಸಿದ್ದಾರೆಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಹೇಳಿದ್ದಾರೆ.
ಮಾತುಕತೆ ವೇಳೆ ದುರ್ಘಟನೆಗೆ ಸಂಬಂಧಿಸಿದಂತೆ ಕಠ್ಮಂಡುವಿಗೆ ಅಗತ್ಯ ನೆರವು ನೀಡುವುದಾಗಿ ತಿಳಿಸಿರುವ ಭಾರತ, ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆಂದು ತಿಳಿಸಿದ್ದಾರೆ.