ಸಿಕಾರ್: ತ್ರಿವಳಿ ತಲಾಖ್ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮುಸ್ಲಿಂ ಮಹಿಳೆಯೊಬ್ಬರು ರಾಜಸ್ತಾನದ ಸಿಕಾರ್ ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬುರ್ಕಾ ಧರಿಸಿರುವ ಮುಸ್ಲಿಂ ಮಹಿಳೆಯೊಬ್ಬರು ರಾಜಸ್ತಾನದ ಸಿಕಾರ್ ನಲ್ಲಿರುವ ಬೀದಿಗಳಲ್ಲಿ ತ್ರಿವಳಿ ತಲಾಖ್ ಮಸೂದೆ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ, ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಯಾವುದೇ ರೀತಿಯ ಬದಲಾವಣೆಗಳನ್ನು ತರಬಾರದು ಎಂದು ಆಗ್ರಹಿಸುತ್ತಿದ್ದಾರೆ.
ಮಾರ್ಚ್.10 ರಂದು ಮಹಾರಾಷ್ಟ್ರದ ಪುಣೆಯಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ಅಖಿಲ ಭಾರತ ಮೌಲ್ವಿ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್'ಬಿ)ಯೊಂದಿಗೆ ಸೇರಿಕೊಂಡು ಕೆಲ ಮುಸ್ಲಿಂ ಮಹಿಳೆಯರು ತ್ರಿವಳಿ ತಲಾಖ್ ವಿರುದ್ಧ ರ್ಯಾಲಿ ನಡೆಸಿದ್ದರು. ಮಾರ್ಚ್ 7 ರಂದೂ ಕೂಡ ಕೋಲ್ಕತಾದಲ್ಲೂ ಇಂತಹದ್ದೇ ಪ್ರತಿಭಟನೆಗಳು ನಡೆದಿದ್ದವು.