
ನವದೆಹಲಿ: ಉತ್ತರ ಪ್ರದೇಶ ಹಾಗೂ ಬಿಹಾರ ಲೋಕಸಭಾ ಉಪಚುನಾವಣೆ ಫಲಿತಾಂಶ ಬಿಜೆಪಿ ವಿರುದ್ಧ ಜನತೆ ಆಕ್ರೋಶಗೊಂಡಿರುವುದನ್ನು ತೋರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಎರಡು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ರಾಹುಲ್ ಗಾಂಧಿ, ಅಭಿನಂದನೆ ಸಲ್ಲಿಸಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪುನರ್ ಜೀವನ ಗೊಳ್ಳಲು ಉತ್ಸುಕವಾಗಿದೆ. ಆದರೆ, ರಾತ್ರೋರಾತ್ರಿ ಇದು ಉಂಟಾಗಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Advertisement