ಆಗ್ನೇಯ ಅರೆಬಿಯನ್ ಸಮುದ್ರ ತೀರದಲ್ಲಿ ವಾಯುಭಾರ ಕುಸಿತ: ಮುಂದಿನ 2 ದಿನ ಭಾರೀ ಮಳೆ ನಿರೀಕ್ಷೆ

ಅರೇಬಿಯನ್ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದಿಂದ ಮುಂದಿನ 24 ಗಂಟೆಗಳಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಅರೇಬಿಯನ್ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದಿಂದ ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಕರಾವಳಿ ತೀರಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಇಂದು ಮತ್ತು ನಾಳೆ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕೊಮೊರಿನ್ ಪ್ರದೇಶದಲ್ಲಿ ಮತ್ತು ದಕ್ಷಿಣ ತಮಿಳುನಾಡು-ದಕ್ಷಿಣ ಕೇರಳದ ಕರಾವಳಿ ಭಾಗಗಳಲ್ಲಿ ಮುಂದಿನ 36 ಗಂಟೆಗಳಲ್ಲಿ ಅತಿಯಾದ ರಭಸದಿಂದ ಗಾಳಿ ಬೀಸಲಿದೆ. ಲಕ್ಷದ್ವೀಪ ಪ್ರದೇಶದಲ್ಲಿ ಕೂಡ ಇದೇ ರೀತಿಯ ವಾತಾವರಣ ಮುಂದಿನ ಎರಡು ದಿನಗಳ ಕಾಲ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮೀನುಗಾರರು ದಕ್ಷಿಣ ತಮಿಳುನಾಡು, ಕೊಮೊರಿನ್ -ಮಾಲ್ಡೀವ್ಸ್ ಪ್ರದೇಶ ಮತ್ತು ಸುತ್ತಮುತ್ತಲ ಭಾಗಗಳಲ್ಲ ಸಮುದ್ರ ತೀರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com