ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹದಲ್ಲಿ ಸಂತೋಷ್ ಹೆಗ್ಡೆ ಭಾಗಿ

ಲೋಕಪಾಲ್ ಗೆ ಸಂಬಂಧಿಸಿದಂತೆ ಮತ್ತೆ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿರುವ....
ಸಂತೋಷ್ ಹೆಗ್ಡೆ
ಸಂತೋಷ್ ಹೆಗ್ಡೆ
Updated on: 
ಹೈದರಾಬಾದ್: ಲೋಕಪಾಲ್ ಗೆ ಸಂಬಂಧಿಸಿದಂತೆ ಮತ್ತೆ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿರುವ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ ಮಾಜಿ ಕರ್ನಾಟಕ ಲೋಕಾಯುಕ್ತ ಹಾಗೂ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸಂತೋಷ್ ಹೆಗ್ಡೆ ಅವರು ಸಾಥ್ ನೀಡಲು ನಿರ್ಧರಿಸಿದ್ದಾರೆ.
2011ರಲ್ಲಿ ಹಜಾರೆ ನೇತೃತ್ವದಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಸಂತೋಷ್ ಹೆಗ್ಡೆ ಅವರು ಸಹ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಮತ್ತೆ ಮಾರ್ಚ್ 23ರಿಂದ ಆರಂಭವಾಗುವ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹಕ್ಕೂ ಬೆಂಬಲ ನೀಡಿದ್ದಾರೆ.
ಹಜಾರೆ ಅವರು ಇತ್ತೀಚಿಗೆ ಬೆಂಗಳೂರಿಗೆ ಭೇಟಿ ನೀಡಿದಾಗ, ದೆಹಲಿಯಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಭಾಗವಹಿಸುವಂತೆ ನನಗೆ ಆಹ್ವಾನ ನೀಡಿದ್ದಾರೆ ಎಂದು ಸಂತೋಷ್ ಹೆಗ್ಡೆ ಅವರು ತಿಳಿಸಿದ್ದಾರೆ.
ಹಜಾರೆ ಅವರು ನನ್ನೊಂದಿಗೆ ಕೈಜೋಡಿಸಬೇಕು ಎಂದಿದ್ದಾರೆ. ಹೀಗಾಗಿ ನಾನು ಒಪ್ಪಿಕೊಂಡಿದ್ದೇನೆ. ಸತ್ಯಾಗ್ರಹ ರಾಜಕೀಯೇತರವಾಗಿರುವವರೆಗೆ ನಾನು ಅವರೊಂದಿಗೆ ಇರುತ್ತೇನೆ ಎಂದು ಮಾಜಿ ಲೋಕಾಯುಕ್ತರು ಹೇಳಿದ್ದಾರೆ.
ಲೋಕಪಾಲ್, ಲೋಕಾಯುಕ್ತ ಮತ್ತು ಚುನಾವಣೆ ಸುಧಾರಣೆಗೆ ಸಂಬಂಧಿಸಿದಂತೆ ಸೂಕ್ತ ಮಸೂದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾರ್ಚ್ 23ರಿಂದ ಅಣ್ಣಾ ಹಜಾರೆ ಅವರು ದೆಹಲಿಯಲ್ಲಿ ಅನಿರ್ಧಾಷ್ಟವಧಿ ಸತ್ಯಾಗ್ರಹ ಆರಂಭಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com