ಉತ್ತರ ಪ್ರದೇಶ : ಉತ್ತರ ಪ್ರದೇಶದ ಗೋರಖ್ ಪುರ ಹಾಗೂ ಫಲ್ಪುರ್ ಲೋಕಸಭಾ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಗೆಲುವು ಬಿಜೆಪಿ ದುರಾಡಳಿತಕ್ಕೆ ಜನತೆ ಕೊಟ್ಟ ತೀರ್ಪು ಎಂದು ಪಕ್ಷದ ಮುಖ್ಯಸ್ಥ ಅಖಿಲ್ ಯಾದವ್ ಹೇಳಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗೆಲುವು ರಾಷ್ಟ್ರೀಯ ಪಕ್ಷಗಳಿಗೆ ಸ್ಪಷ್ಪ ರಾಜಕೀಯ ಸಂದೇಶ ರವಾನಿಸಿದೆ. ಜಿಎಸ್ ಟಿ ಹಾಗೂ ನೋಟ್ ರದ್ದತಿ ನಂತರ ಕೃಷಿಕರು ಅಸಂತೋಷಗೊಂಡಿದ್ದಾರೆ. ಇದು ಚುನಾವಣೆಯಲ್ಲಿ ಪರಿಣಾಮ ಬೀರಿದೆ ಎಂದರು.
ಬಿಜೆಪಿ ಜನತೆಗೆ ನೀಡಿದ್ಧ ಭರವಸೆ ಈಡೇರಿಸುವಲ್ಲಿ ವಿಫಲವಾಗಿದ್ದು, ಈ ಗೆಲುವು ಸಾಮಾಜಿಕ ನ್ಯಾಯಕ್ಕೆ ಸಂದ ಜಯವಾಗಿದ್ದು, ಉಪಚುನಾವಣೆ ಮೊದಲೇ ಮೈತ್ರಿ ಮಾಡಿಕೊಂಡಿದ್ದ ಬಿಎಸ್ಪಿ ಅಧಿನಾಯಕಿ ಮಾಯಾವತಿ ಹಾಗೂ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಅಖಿಲೇಶ್ ಯಾದವ್ ಹೇಳಿದರು.
Advertisement