ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ನಿಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸಂತಾಪ

ಪ್ರಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರು ನಿಧನ ಹೊಂದಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ...
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ; ಪ್ರಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರು ನಿಧನ ಹೊಂದಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ. 
ಸ್ಟೀಫನ್ ಹಾಕಿಂಗ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್ ಅವರು, ಸ್ಟೀಫನ್ ಹಾಕಿಂಗ್ ಅವರ ನಿಧನ ಸುದ್ಧಿ ಬಹಳ ಬೇಸರವನ್ನು ತಂದಿದೆ. ಸ್ಟೀಫನ್ ಅವರ ಆಲೋಚನೆಗಳು ಅದ್ಭುತವಾಗಿದ್ದು, ಅವರ ಧೈರ್ಯ, ಸ್ಥಿತಿಸ್ಥಾಪಕತ್ವವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಹೇಳಿದ್ದಾರೆ. 
ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಸಂತಾಪ ಸೂಚಿಸಿದ್ದು, ಪ್ರೊಫೆಸರ್ ಸ್ಟೀಫನ್ ಹಾಕಿಂದ್ ಅವರು ಅತ್ಯುತ್ತಮ ವಿಜ್ಞಾನಿಯಾಗಿದ್ದರು. ಅವರ ಅಗಲಿಕೆ ನೋವು ತಂದಿದೆ. ಸ್ಟೀಫನ್ ಅವರ ದೃಢತೆ ಇಡೀ ವಿಶ್ವಕ್ಕೆ ಪ್ರೇರಣೆಯಾಗಿದೆ. ಹಾಕಿಂಗ್ ಅವರ ಪ್ರವರ್ತಕ ಕಾರ್ಯಗಳು ವಿಶ್ವವನ್ನು ಉತ್ತಮ ಸ್ಥಳವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com