ಉತ್ತರ ಪ್ರದೇಶ, ಬಿಹಾರ ಉಪ ಚುನಾವಣೆ: ಗೆಲುವಿನತ್ತ ಎಸ್ಪಿ, ಆರ್ ಜೆಡಿ, ಬಿಜೆಪಿಗೆ ಮುಖಭಂಗ

ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳು ಮತ್ತು ಬಿಹಾರದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ....
ಅಖಿಲೇಶ್ ಯಾದವ್- ಯೋಗಿ ಆದಿತ್ಯನಾಥ್
ಅಖಿಲೇಶ್ ಯಾದವ್- ಯೋಗಿ ಆದಿತ್ಯನಾಥ್
Updated on
ನವದೆಹಲಿ: ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳು ಮತ್ತು ಬಿಹಾರದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಸಮಾಜವಾದಿ ಪಕ್ಷ ಮತ್ತು ಆರ್ ಜೆಡಿ ಭರ್ಜರಿ ಗೆಲುವಿನ ಸನಿಹದಲ್ಲಿವೆ. ಆಡಳಿತರೂಢ ಬಿಜೆಪಿ ಎರಡೂ ರಾಜ್ಯಗಳಲ್ಲೂ ತೀವ್ರ ಮುಖಭಂಗ ಅನುಭವಿಸಿದೆ.
ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳಲ್ಲೂ ಆಡಳಿತರೂಢ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಐದು ಬಾರಿ ಪ್ರತಿನಿಧಿಸಿದ್ದ ಗೋರಖ್ ಪುರದಲ್ಲಿ ಸಮಾಜವಾದಿ ಪಕ್ಷದ ಪ್ರವೀಣ್ ಕುಮಾರ್ ನಿಶಾದ್ ಅವರು 17ನೇ ಸುತ್ತಿನಲ್ಲೂ 26,960 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಉಪೇಂದ್ರ ದತ್ ಶುಕ್ಲಾ ಅವರು ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನು ಫಲ್ಪುರ್ ಲೋಕಸಭಾ ಕ್ಷೇತ್ರದಲ್ಲೂ ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಗೇಂದ್ರ ಪ್ರತಾಪ್ ಅವರು ಬಿಜೆಪಿ ಅಭ್ಯರ್ಥಿ ಕೌಶಲೇಂದ್ರ ಸಿಂಗ್ ಅವರ ವಿರುದ್ಧ 29 ಸಾವಿರ ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಉಪ ಮುಖ್ಯಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಂದ ತೆರವಾಗಿದ್ದ ಗೋರಖ್ ಪುರ್ ಮತ್ತು ಫುಲ್ಪುರ್ ಲೋಕಸಭಾ ಸ್ಥಾನಗಳಿಗೆ ಕಳೆದ ಭಾನುವಾರ ಉಪ ಚುನಾವಣೆ ನಡೆದಿತ್ತು.
ಬಿಹಾರದ ಅರೆರಿಯಾ ಲೋಕಸಭಾ ಕ್ಷೇತ್ರ ಮತ್ತು ಜೆಹಾನಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಆರ್'ಜೆಡಿ ಮುನ್ನಡೆ ಸಾಧಿಸಿದ್ದು, ಭಬುವಾ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಮುನ್ನಡೆಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com