ಉಪ ಚುನಾವಣೆ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ, ಬಿಹಾರದಲ್ಲಿ ಆರ್'ಜೆಡಿಮುನ್ನಡೆ

ಉತ್ತರಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ನಜೆದ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಆರಂಭಗೊಂಡಿದ್ದು, ಉತ್ತರಪ್ರದೇಶದ ಗೋರಖ್ಪುರದಲ್ಲಿ ಸಮಾಜವಾದಿ ಪಕ್ಷ ಹಾಗೂ ಬಿಹಾರ ರಾಜ್ಯದಲ್ಲಿ ಆರ್'ಜೆಡಿ ಮುನ್ನಡೆ ಸಾಧಿಸಿದೆ.
ಎರಡು ರಾಜ್ಯಗಳ ಉಪ ಚುನಾವಣೆ ಮತಎಣಿಕೆ ಪ್ರಕ್ರಿಯೆ ಆರಂಭ
ಎರಡು ರಾಜ್ಯಗಳ ಉಪ ಚುನಾವಣೆ ಮತಎಣಿಕೆ ಪ್ರಕ್ರಿಯೆ ಆರಂಭ
ನವದೆಹಲಿ: ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ನಜೆದ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಆರಂಭಗೊಂಡಿದ್ದು, ಉತ್ತರಪ್ರದೇಶದ ಗೋರಖ್ಪುರದಲ್ಲಿ ಸಮಾಜವಾದಿ ಪಕ್ಷ ಮುನ್ನಡೆ ಸಾಧಿಸಿದ್ದರೆ, ಬಿಹಾರ ರಾಜ್ಯದ ಅರಾರಿಯಾ ಲೋಕಸಭಾ ಕ್ಷೇತ್ರದಲ್ಲಿ ಆರ್'ಜೆಡಿ ಮುನ್ನಡೆ ಸಾಧಿಸಿದೆ. 
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಿಂದ ತೆರವಾಗಿರುವ ಗೋರಖ್ಪುರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಪ್ರವೀಣ್ ಅವರು ಬಿಜೆಪಿಯ ಉಪೇಂದ್ರ ದತ್ತ ಶುಕ್ಲಾ ವಿರುದ್ಧ ಮುನ್ನಡೆಯುತ್ತಿದ್ದಾರೆ. 
ಉಪ ಮುಖ್ಯಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಂದ ತೆರವಾಗಿದ್ದ ಫುಲ್ಪುರ ಕ್ಷೇತ್ರದಲ್ಲಿ 
ಬಿಜೆಪಿಯ ಕೌಶಲೇಂದ್ರ ಸಿಂಗ್ ವಿರುದ್ಧ  ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಗೇಂದ್ರ ಪ್ರತಾಪ್ ಅವರು ಸ್ಪರ್ಧೆ ನಡೆಸುತ್ತಿದ್ದಾರೆ. 
ಬಿಹಾರ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಗತಿಯಲ್ಲಿದೆ. ಆಡಳಿತಾರೂಢ ಜೆಡಿಯು-ಬಿಜೆಪಿ ಮತ್ತು ವಿರೋಧ ಪಕ್ಷ ಆರ್'ಜೆಡಿ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. 
ಬಿಹಾರದ ಅರೆರಿಯಾ ಲೋಕಸಭಾ ಕ್ಷೇತ್ರದ ಮತ್ತು ಜೆಹಾನಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಆರ್'ಜೆಡಿ ಮುನ್ನಡೆ ಸಾಧಿಸಿದ್ದು, ಭಬುವಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com