ಎಸ್ಪಿ-ಬಿಎಸ್ಪಿ ಮೈತ್ರಿ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಎರಡು ಲೋಕಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಉತ್ತರ ಪ್ರದೇಶ ಎರಡು ಲೋಕಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಗೋರಖ್ ಪುರ್ ಮತ್ತು ಫಲ್ಪುರ್ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಹೇಳಿದ್ದಾರೆ.
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಮೈತ್ರಿ ದುರ್ಬಲವಾಗಿದೆ ಎಂದು ನಾವು ಭಾವಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ಯೋಗಿ ಹೇಳಿದ್ದಾರೆ.
ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎಸ್ಪಿ ಸಂಸದರು ರಾಜ್ಯದ ಅಭಿವೃದ್ಧಿಗೆ ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಉಪ ಮುಖ್ಯಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಂದ ತೆರವಾಗಿದ್ದ ಗೋರಖ್ ಪುರ್ ಮತ್ತು ಫುಲ್ಪುರ್ ಲೋಕಸಭಾ ಸ್ಥಾನಗಳಿಗೆ ಕಳೆದ ಭಾನುವಾರ ಉಪ ಚುನಾವಣೆ ನಡೆದಿತ್ತು. ಅದರ ಫಲಿತಾಂಶ ಇಂದು ಹೊರಬಿದ್ದಿದ್ದು, ಎರಡೂ ಕ್ಷೇತ್ರಗಳಲ್ಲಿ ಎಸ್ಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com