ಶ್ರೀನಗರ(ಜಮ್ಮು ಕಾಶ್ಮೀರ): ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಿಜೆಪಿ ಮುಖಂಡರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ದಾಳಿಯಲ್ಲಿ ಅವರ ವೈಯುಕ್ತಿಕ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೋಲೀಸರು ತಿಳಿಸಿದರು.
ಪುಲ್ವಾಮಾ ಜಿಲ್ಲೆಯ ಬಲಹಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ ಬಿಜೆಪಿ ಮುಖಂಡ ಅನ್ವರ್ ಖಾನ್ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಆದರೆ ಆ ಗುಂಡಿನ ದಾಳಿಯಿಂದ ಖಾನ್ ಪಾರಾಗಿದ್ದು ಅವರ ಭದ್ರತಾ ಸಿಬ್ಬಂದಿ ಬಿಲಾಲ್ ಅಹ್ಮದ್ ಗಾಯಗೊಂಡಿದ್ದಾರೆ.
ಗಾಯಾಳು ಬಿಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೋಲೀಸರು ಮಾಹಿತಿ ನೀಡಿದರು.