ಸಿಬಿಎಸ್ಇ 12ನೇ ತರಗತಿ ಅಕೌಂಟೆನ್ಸಿ ಪಶ್ನೆಪತ್ರಿಕೆ ಸೋರಿಕೆ: ತನಿಖೆಗೆ ದೆಹಲಿ ಸರ್ಕಾರ ಆದೇಶ

ಸಿಬಿಎಸ್ಇ 12ನೇ ತರಗತಿಯ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ವಾಟ್ಸ್ ಆ್ಯಪ್ ಮೂಲಕ ಸೋರಿಕೆಯಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಗುರುವಾರ ತಿಳಿದುಬಂದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಸಿಬಿಎಸ್ಇ 12ನೇ ತರಗತಿಯ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ವಾಟ್ಸ್ ಆ್ಯಪ್ ಮೂಲಕ ಸೋರಿಕೆಯಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಗುರುವಾರ ತಿಳಿದುಬಂದಿದೆ. 
ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಸಿಬಿಎಸ್ಇ 12ನೇ ತರಗತಿಯ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಹಲವು ದೂರುಗಳು ಬಂದಿವೆ ಎಂದು ದೃಢೀಕರಿಸಿದ್ದಾರೆ. 
ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿರುವ ಪ್ರಶ್ನೆ ಪತ್ರಿಯೆಯನ್ನು ಸಿಬಿಎಸ್ಇ ಅಕೌಂಟೆನ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಯೊಂದಿಗೆ ತಾಳೆ ಹಾಕಿ ನೋಡುವಂತೆ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಇದೀಗ ಪ್ರಶ್ನೆ ಪತ್ರಿಗೆ ತಾಳೆಯಾಗುತ್ತಿದೆ ಎಂದು ಹೇಳಿದ್ದಾರೆ. 
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಸಂಕಷ್ಟವನ್ನು ಅನುಭವಿಸಬಾರದು. ಪ್ರಕರಣ ಸಂಬಂಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 
ಸಿಬಿಎಸ್ಇ 12ನೇ ತರಗತಿಯ ಅಕೌಂಟೆನ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇಂದು ಬೆಳಿಗ್ಗೆಯಿಂದಲೇ ಸಾಮಾಜಿಕ ಜಾಲತಾಣ ವಾಟ್ಸ್ ಅಪ್ ಮೂಲಕ ಹರಿದಾಡುತ್ತಿದ್ದು, ಇದಕ್ಕೆ ಹಲವು ಟೀಕೆಗಳು ವ್ಯಕ್ತವಾಗತೊಡಗಿವೆ. 
ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳು ಇದೇ ಮಾರ್ಚ್ 5 ರಿಂದ ಆರಂಭಗೊಂಡಿದ್ದು, ಕೊನೆಯ ಪರೀಕ್ಷೆ ಏ.13ಕ್ಕೆ ನಿಗದಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com