ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಆರೋಪಿಯಾಗಿರುವ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾ.26ರವ್ರೆಗೆ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆಯುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ.
ಈ ಹಿಂದೆ ಮಾ.20ರವರೆಗೆ ಎಂದಿದ್ದ ತನ್ನ ಅಆದೇಶವನ್ನೇ ಮತ್ತೆ ಆರು ದಿನ ದಿನ ವಿಸ್ತರಿಸಿದ ಹೈಕೋರ್ಟ್ ಕಾರ್ತಿ ಅವರಿಗೆ ಮಧ್ಯಂತರ ಪರಿಹಾರ ನೀಡಿದೆ.
ನ್ಯಾಯಮೂರ್ತಿಗಳಾದ ಎಸ್. ಮುರಳಿಧರ್ ಮತ್ತು ಐ ಎಸ್ ಮೆಹ್ತಾ ಅವರನ್ನೊಳಗೊಂಡ ಪೀಠವು ವಿಚಾರಣ ದಿನಾಂಕವನ್ನು ಆರು ದಿನಗಳ ಮಟ್ಟಿಗೆ ವಿಸ್ತರಿಸಿ ಆದೇಶಿಸಿದೆ. ಕಾರ್ತಿ ಚಿದಂಬರಂ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್ ಮಾ.20 ರಂದು ಲಭ್ಯವಿಲ್ಲದಿರುವ ಕಾರಣ ವಿಚಾರಣಾ ದಿನಾಂಕವನ್ನು ಮುಂದೂಡಲಾಗಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಚಾರಣಾ ದಿನಾಂಕವನ್ನು ಮಾರ್ಚ್ 22 ಕ್ಕೆ ಬದಲಿಸಿದರೆ ಯಾವುದೇ ಆಕ್ಷೇಪಗಳಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ನ್ಯಾಯಾಲಯವು ಮಾ.26ಕ್ಕೆ ಅರ್ಜಿಯ ವಿಚಾರಣೆ ನಡೆಸುವುದಾಗಿ ತೀರ್ಮಾನಿಸಿದೆ.
ಜಾರಿ ನಿರ್ದೇಶನಾಲಯದಿಂದ ಯಾವುದೇ ಆಕ್ಷೇಪವಿಲ್ಲದ ಕಾರಣ 26ಕ್ಕೆ ವಿಚಾರಣೆ ಕೈಗೊಳ್ಳ್ಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಇದಕ್ಕೂ ಮುನ್ನ ಕಾರ್ತಿ ವಿರುದ್ಧ ಜಾರಿಯಲ್ಲಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾ.20 ರವರೆಗೆ ಯಾವುದೇ ಕ್ರಮ ತೆಗೆದುಕೊಳ್ಳಬಾರದೆಂದು ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿತ್ತು.