ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ: ಎಐಎಡಿಎಂಕೆ ವಕ್ತಾರ ವಜಾ

ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡದಿದ್ದರೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ....
ಪನ್ನೀರ್ ಸೆಲ್ವಂ, ಪಳನಿಸ್ವಾಮಿ
ಪನ್ನೀರ್ ಸೆಲ್ವಂ, ಪಳನಿಸ್ವಾಮಿ
Updated on: 
ಚೆನ್ನೈ: ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡದಿದ್ದರೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಮಂಡಿಸುತ್ತಿರುವ ಅವಿಶ್ವಾಸ ನಿರ್ಣಯ ಬೆಂಬಲಿಸುವುದಾಗಿ ಹೇಳಿದ್ದ ಪಕ್ಷದ ವಕ್ತಾರ ಕೆಸಿ ಪಳನಿಸಾಮಿ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
ಎಐಎಡಿಎಂಕೆ ಸಂಚಾಲಕ ಒ ಪನ್ನೀರ್ ಸೆಲ್ವಂ ಮತ್ತು ಜಂಟಿ ಸಂಚಾಲಕ ಇಕೆ ಪಳನಿಸ್ವಾಮಿ ಅವರು ವಕ್ತಾರ ಪಳನಿಸಾಮಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ವಿವರಣೆ ನೀಡಲು ಯಾವುದೇ ಅವಕಾಶ ನೀಡಿಲ್ಲ. ಇಪಿಎಸ್ ಮತ್ತು ಒಪಿಎಸ್ ಬಿಜೆಪಿಗೆ ಹೆದರಿ ತಮ್ಮನ್ನು ವಜಾಗೊಳಿಸಿದ್ದಾರೆ ಎಂದು ಪಳನಿಸಾಮಿ ಆರೋಪಿಸಿದ್ದಾರೆ. ಅಲ್ಲದೆ ತಮ್ಮನ್ನು ವಕ್ತಾರ ಹುದ್ದೆಯಿಂದ ವಜಾಗೊಳಿಸಿರುವ ನಿರ್ಧಾರ ಪ್ರಜಾಪ್ರಭುತ್ವ ವಿರೋಧಿ ಎಂದಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಟಿಡಿಪಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದು, ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದೆ. ಇದಕ್ಕೆ ಷರತ್ತುಬದ್ಧ ಬೆಂಬಲ ನೀಡುವುದಾಗಿ ಎಐಎಡಿಎಂಕೆ ವಕ್ತಾರ ಪಳನಿಸಾಮಿ ಹೇಳಿದ್ದರು. ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಹುದ್ದೆಯಿಂದ ವಜಾಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com