ಆಂಧ್ರಪ್ರದೇಶ ವಿಶೇಷ ಸ್ಥಾನಮಾನ ವಿವಾದ: ಎನ್'ಡಿಎ ಮೈತ್ರಿಕೂಟ ತೊರೆದ ಟಿಡಿಪಿ

ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಮುಂದಾಗಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ...
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು
ಹೈದರಾಬಾದ್: ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಮುಂದಾಗಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿರುವ ತೆಲುಗು ದೇಶಂ ಪಕ್ಷ, ಇದೀಗ ಎನ್'ಡಿಎ ಒಕ್ಕೂಟದಿಂದ ಹೊರ ಬರಲು ನಿರ್ಧಾರ ಕೈಗೊಂಡಿದೆ. ಟಿಡಿಪಿಯ ಈ ನಿರ್ಧಾರದಿಂದ ಬಿಜೆಪಿ ನೇತೃತ್ವದ ಎನ್'ಡಿಎ ಒಕ್ಕೂಟಕ್ಕೆ ತೀವ್ರ ಹಿನ್ನಡೆಯುಂಟಾದಂತಾಗಿದೆ. 
ಎನ್'ಡಿಎ ಮೈತ್ರಿ ತ್ಯಜಿಸುವ ಕುರಿತು ಪಕ್ಷದಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿರುವ ಪ್ರಕಟಣೆಯಲ್ಲಿ ಟಿಡಿಪಿ ತಿಳಿಸಿದೆ. 
ಪಕ್ಷದ ಪಾಲಿಟ್ ಬ್ಯೂರೋ ಸದಸ್ಯದ ಜೊತೆಗೆ ಈ ನಿರ್ಧಾರದ ಬಗ್ಗೆ ಚರ್ಚೆ ನಡೆಸಿರುವ ಚಂದ್ರಬಾಬು ನಾಯ್ಡು ಅವರು, ಪಕ್ಷದ ತೀರ್ಮಾನದ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೂ ಕೂಡ ಪತ್ರ ಬರೆಯಲಿದ್ದಾರೆ. 
ಆಂಧ್ರಪ್ರದೇಶ ರಾಜ್ಯಕ್ಕೆ ಪ್ರಧಾನಮಂತ್ರಿ ಮೋದಿ ಸರ್ಕಾರ ಹೆಚ್ಚಿನ ಅನುದಾನ ನೀಡದ ಹಿನ್ನಲೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ಟಿಡಿಪಿ ತಿರುಗಿಬಿದ್ದಿತ್ತು. ಇದೀಗ ರಾಜ್ಯದ ಜನತೆಯ ಹಿತಕ್ಕಾಗಿ ರಾಜಕೀಯವನ್ನು ಬದಿಗಿಟ್ಟು ಹೋರಾಡುತ್ತೇವೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ನೀಡುವಂತೆ ವೈಎಸ್ಆರ್ ಕಾಂಗ್ರೆಸ್ ಪಕ್ಷವು ನಿನ್ನೆಯಷ್ಟೇ ಲೋಕಸಭೆಯಲ್ಲಿ ನೋಟಿಸ್ ನೀಡಿತ್ತು. ಇದಕ್ಕೆ ಟಿಡಿಪಿ ಕೂಡ ಬೆಂಬಲ ಸೂಚಿಸಿತ್ತು. ಆದರೆ, ಪಕ್ಷದ ಸಭೆಯ ಬಳಿಕ, ಕೇಂದ್ರದ ವಿರುದ್ಧ ಪ್ರತ್ಯೇಕವಾಗಿ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗುವುದು ಎಂದು ಟಿಡಿಪಿ ತಿಳಿಸಿತ್ತು. 
ಅವಿಶ್ವಾತ ಗೊತ್ತುವಳಿ ಮಂಡನೆಗೆ ಅವಕಾಶ ಪಡೆಯಲು ಲೋಕಸಭೆಯಲ್ಲಿ 50 ಸದಸ್ಯರ ಬೆಂಬಲ ಅಗತ್ಯವಿರುತ್ತದೆ. 536 ಸ್ಥಾನಗಳಿರುವ ಲೋಕಸಭೆಯಲ್ಲಿ ಬಿಜೆಪಿಯೊಂದೇ 274 ಸದಸ್ಯರ ಬಲವನ್ನು ಹೊಂದಿದೆ. 
ಕೇಂದ್ರ ಬಜೆಟ್ ನಲ್ಲಿ ಆಂಧ್ರಪ್ರದೇಶ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಈ ಹಿಂದೆ ಟಿಡಿಪಿ ಆರೋಪ ಮಾಡಿತ್ತು. ನಂತರ ಎನ್'ಡಿಎ ಪಕ್ಷದ ಜೊತೆಗಿನ ಟಿಡಿಪಿ ಸಂಬಂಧದಲ್ಲಿ ಒಡಕು ಮೂಡಿತ್ತು. ಇದರ ಬೆನ್ನಲ್ಲೇ ಕೇಂದ್ರದ ನಾಗರಿಕ ವಿಮಾನಯಾನ ಸಚಿವರಾದ ಟಿಡಿಪಿಯ ಅಶೋಕ್ ಗಜಪತಿ ರಾಜು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ವೈ.ಎಸ್.ಚೌಧರಿಯವರು ಸಚಿವ ಸಂಪುಟಕ್ಕೆ ರಾಜಿನಾಮೆ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com