ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಜೆಎನ್ ಯು ಪ್ರೊಫೆಸರ್ ವಿರುದ್ಧ ಎಫ್ ಐ ಆರ್

ತರಗತಿಯಲ್ಲಿ ಮಹಿಳಾ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಜವಹರ್ ಲಾಲ್ ನೆಹರು ವಿವಿ ಪ್ರೊಫೆಸರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ತರಗತಿಯಲ್ಲಿ ಮಹಿಳಾ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಜವಹರ್ ಲಾಲ್ ನೆಹರು ವಿವಿ ಪ್ರೊಫೆಸರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವಿವಿಯಲ್ಲಿ ಲೈಫ್ ಸೈನ್ಸ್ ಪಾಠ ಮಾಡುವ ಅತುಲ್ ಜೊಹ್ರಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ 9 ವಿದ್ಯಾರ್ಥಿಗಳ ಪ್ರೊಫೆಸರ್ ವಿರುದ್ದ ಪ್ರತಿಭಟನೆ ನಡೆಸಿದ್ದರು.
9 ವಿದ್ಯಾರ್ಥಿನಿಯರಲ್ಲಿ 7 ವಿದ್ಯಾರ್ಥಿಗಳು ದಾಖಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ದೆಹಲಿಯ ವಸಂತ್ ಕುಂಜ್ ನಾರ್ತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 354 ಮತ್ತು 509 ರ ಅಡಿಯಲ್ಲಿ  ಕೇಸ್ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com