ಆಂಧ್ರದ ಹಿತಸಕ್ತಿಗಾಗಿ ಎನ್ ಡಿಎದಿಂದ ಹೊರಬರಲಾಗಿದೆ: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶಕ್ಕೆ ಶಾಶ್ವತ ಸ್ಥಾನಮಾನ ನೀಡದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿರುವುದಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ಎಂ. ಚಂದ್ರಬಾಬು ನಾಯ್ಡು
ಎಂ. ಚಂದ್ರಬಾಬು ನಾಯ್ಡು

ಅಮರಾವತಿ: ಆಂಧ್ರ ಪ್ರದೇಶಕ್ಕೆ ಶಾಶ್ವತ ಸ್ಥಾನಮಾನ ನೀಡದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿರುವುದಾಗಿ  ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ವಿಶೇಷ ಸ್ಥಾನಮಾನದ ಕಾಯ್ದೆ ಲೋಕಸಭೆಯಲ್ಲಿದ್ದು, ವಿಭಜನೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆ ಇನ್ನೂ ಈಡೇರಿಲ್ಲ. ಈ ಸಂದರ್ಭದಲ್ಲಿ ಎನ್ ಡಿಎ ಮೈತ್ರಿಯಿಂದ ಹೊರಬಾರದೆ ಅನ್ಯ ಮಾರ್ಗವಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಸ್ವಾರ್ಥ ಮನೋಭಾವದಿಂದ ಈ ನಿರ್ಧಾರ ಕೈಗೊಂಡಿಲ್ಲ. ಆಂಧ್ರಪ್ರದೇಶ ಹಿತಾಸಕ್ತಿಗಾಗಿ ಎನ್ ಡಿಎ ಮೈತ್ರಿಯಿಂದ ಹೊರಬರಲಾಗಿದೆ. ನಾಲ್ಕು ವರ್ಷಗಳ ಅವಧಿಯಲ್ಲಿ 29 ಬಾರಿ ದೆಹಲಿಗೆ ಭೇಟಿ ನೀಡಿದ್ದು, ಎಲ್ಲಾ ಪ್ರಯತ್ನ ಮಾಡಲಾಗಿದೆ. ಕೇಂದ್ರಸರ್ಕಾರ ಕೊನೆಯ ಬಜೆಟ್ ನಲ್ಲಿ ಆಂಧ್ರಪ್ರದೇಶದ ವಿಶೇಷ ಸ್ಥಾನಮಾನ ನೀಡದೆ ಇದುದ್ದರಿಂದ ಕ್ಯಾಬಿನೇಟ್ ನಿಂದ ತಮ್ಮ ಸಚಿವರನ್ನು ವಾಪಾಸ್ ಕರೆಯಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಅನುದಾನ ನೀಡುವಂತೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ. ಭಾವಾತ್ಮಕದಿಂದ ಅನುದಾನ ಹೆಚ್ಚಿಸುವುದಿಲ್ಲ ಎಂಬ ಹೇಳಿಕೆ ಬೇಜವಾಬ್ದಾರಿಯುತವಾದದ್ದು, ಭಾವನಾತ್ಮಕ ಅಂಶಗಳು ಅತ್ಯಂತ ಹೆಚ್ಚಿನ ಶಕ್ತಿ ಹೊಂದಿವೆ. ಕೇಂದ್ರ ಸರ್ಕಾರ ನ್ಯಾಯಯುತವಾಗಿ ನಡೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಯುಪಿಎ ಆಡಳಿತಾವಧಿಯಲ್ಲಿ 2014ರಲ್ಲಿ ತೆಲಂಗಾಣ ಪ್ರತ್ಯೇಕ ರಾಜ್ಯವಾದ ನಂತರ ಆಂಧ್ರಪ್ರದೇಶ ಆದಾಯ ಗಳಿಕೆಯಲ್ಲಿ ನಷ್ಟ ಅನುಭವಿಸುತ್ತಿದೆ.  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿಶೇಷ ಅನುದಾನ ನೀಡುವುದಾಗಿ ಘೋಷಿಸಿತ್ತು, ಆದರೆ, ಇದೀಗ ಯಾವ ಅನುದಾನ ನೀಡದ ಹಿನ್ನೆಲೆಯಲ್ಲಿ ಟಿಡಿಪಿ ಎನ್ ಡಿಎ ಮೈತ್ರಿ ತೊರೆದಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com