ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವೈಎಸ್ ಆರ್ ಕಾಂಗ್ರೆಸ್ ಅವಿಶ್ವಾಸ ನಿರ್ಣಯಕ್ಕೆ ಶಿವಸೇನೆ ಬೆಂಬಲ?

ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅವಿಶ್ವಾಸ ನಿರ್ಣಯಕ್ಕೆ ಶಿವಸೇನೆ ಬೆಂಬಲ ನೀಡುವ ಸಾಧ್ಯತೆ ಇದೆ.
ಮುಂಬೈ: ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅವಿಶ್ವಾಸ ನಿರ್ಣಯಕ್ಕೆ ಶಿವಸೇನೆ ಬೆಂಬಲ ನೀಡುವ ಸಾಧ್ಯತೆ ಇದೆ.
ಎನ್ ಡಿಎ ಮೈತ್ರಿಕೂಟದ ಪ್ರಮುಖ ಮಿತ್ರ ಪಕ್ಷ ಶಿವಸೇನೆ ಇದೀಗ ಮೋದಿ ಸರ್ಕಾರದ ವಿರುದ್ಧ ಟಿಡಿಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷ ನೀಡಿರುವ ಅವಿಶ್ವಾಸ ನಿರ್ಣಯ ನೋಟಿಸ್ ಗೆ ಬೆಂಬಲ ನೀಡಲು ಮುಂದಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಈಗಾಗಲೇ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶಿವಸೇನೆ ಸಂಸದರ ಸಭೆ ಕರೆದಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ನೀಡಲಾಗಿರುವ ವಿಶ್ವಾಸವ ನಿರ್ಣಯ ನೋಟಿಸ್ ಗೆ ಬೆಂಬಲ ನೀಡಬೇಕೇ ಇಲ್ಲವೆ ಎಂಬುದರ ಕುರಿತು ಚರ್ಚೆ ನಡೆಸಲಿದ್ದಾರೆ.
ಇನ್ನು ಎನ್ ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದ್ದರೂ, ಕೇಂದ್ರ ಸರ್ಕಾರದಲ್ಲಿ ತನ್ನ ಸಂಸದರಾ ಪಾಲ್ಗೊಂಡಿದ್ದರೂ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಶಿವಸೇನೆ, ಬಹುತೇಕ ಎನ್ ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಮೋದಿ ಸರ್ಕಾರದ ವಿರುದ್ಧ ಹಲವು ಸೈದ್ಧಾಂತಿಕ ನಿಲುವುಗಳನ್ನು ಹೊಂದಿರುವ ಶಿವಸೇನೆ ಈ ಹಿಂದೆ ಸಾಕಷ್ಟು ಬಾರಿ ಮೋದಿ ಸರ್ಕಾರದ ವಿರುದ್ಧ ವಾಗ್ಳಾಳಿ ನಡೆಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿನ ಸಂಪಾದಕೀಯದ ಮೂಲಕ ಶಿವಸೇನೆ ಮೋದಿ ಸರ್ಕಾರದ ವಿರುದ್ಧ ವಾಗ್ಗಾಳಿ ನಡೆಸಿದೆ.
ಹೀಗಾಗಿ ನಾಳೆ ನಡೆಯಲಿರುವ  ಸಭೆಯಲ್ಲಿ ಶಿವಸೇನೆ ಮೋದಿ ಸರ್ಕಾರದಿ ವಿರುದ್ಧ ನೀಡಲಾಗಿರುವ ಅವಿಶ್ವಾಸ ನಿರ್ಣಯ ನೋಟಿಸ್ ಗೆ ಬೆಂಬಲ ನೀಡಿದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com