

ನವದೆಹಲಿ: 2019ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದಾಗಿ ತೆಲುಗು ದೇಶಂ ಎನ್ ಡಿ ಎ ಮೈತ್ರಿಯಿಂದ ಹೊರಬಂದಿದೆ ಎಂದು ಬಿಜೆಪಿ ಹೇಳಿಕೆ ನೀಡಿದೆ.
ತ್ರಿಪುರಾದಂತೆ ಆಂಧ್ರಪ್ರದೇಶದಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ನಾಯಕ ಜಿವಿಎಲ್ ನರಸಿಂಹರಾವ್ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಟಿಡಿಪಿಗೆ ದೊಡ್ಡ ಸವಾಲು ಎದುರಾಗಲಿದೆ. 2019ರ ಚುನಾವಣೆಯಲ್ಲಿ ಸೋಲು ಕಟಿಟ್ಟ ಬುತ್ತಿಯಾಗಿದ್ದು, ರಾಜಕೀಯ ನೆಲೆ ಕಳೆದುಕೊಳ್ಳಲಿದ್ದಾರೆ ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ಅಲ್ಲಿನ ಸರ್ಕಾರ ಹಾಗೂ ಟಿಡಿಪಿ ನಡೆದುಕೊಂಡಿದ್ದು, ಬಿಜೆಪಿ ಈ ಅವಕಾಶ ಸದುಪಯೋಗಪಡಿಸಿಕೊಂಡು ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಇದು ಸಾಮಾನ್ಯ ಪದ್ಧತಿಯಾಗಿದೆ. ಚುನಾವಣಾ ವರ್ಷವಾದ್ದರಿಂದ ಎಲ್ಲಾ ರಾಜ್ಯಗಳು ಬೇಡಿಕೆ, ಸಮಸ್ಯೆಗಳು ಇದ್ದೇ ಇರುತ್ತವೆ. ಈ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲಾ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಕ್ವೀ ಹೇಳಿದ್ದಾರೆ.