ಎನ್ ಡಿ ಎ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಆರ್ ಎಸ್, ಬೆಂಬಲ ಇಲ್ಲ

ಕೇಂದ್ರದ ಎನ್ ಡಿಎ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಲು ಉದ್ದೇಶಿಸಿರುವ ಅವಿಶ್ವಾಸ ನಿರ್ಣಯ ರಾಜಕೀಯ ಗಿಮ್ಮಿಕ್ ಆಗಿದೆ ಎಂದು ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಬಣ್ಣಸಿದ್ದಾರೆ
ಕೆ. ಚಂದ್ರಶೇಖರರಾವ್
ಕೆ. ಚಂದ್ರಶೇಖರರಾವ್
Updated on: 

ಹೈದ್ರಾಬಾದ್ : ಕೇಂದ್ರದ ಎನ್ ಡಿಎ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಲು ಉದ್ದೇಶಿಸಿರುವ ಅವಿಶ್ವಾಸ ನಿರ್ಣಯ ರಾಜಕೀಯ ಗಿಮ್ಮಿಕ್ ಆಗಿದೆ ಎಂದು ತೆಲಂಗಾಣ  ರಾಷ್ಟ್ರ ಸಮಿತಿ  ಅಧ್ಯಕ್ಷ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಬಣ್ಣಸಿದ್ದು, ಅವಿಶ್ವಾಸ ನಿರ್ಣಯವನ್ನೂ ತಾವೂ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶಕ್ಕಾಗಿ ವಿಶೇಷ ಸ್ಥಾನಮಾನದ ವಿಷಯಕ್ಕೆ ಸಂಬಂಧಿಸಿದಂತೆ ಟಿಡಿಪಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಬೆನ್ನಲ್ಲೇ, ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

 ಆದಾಗ್ಯೂ, ಆಂಧ್ರಪ್ರದೇಶ ವಿಶೇಷ ಸ್ಥಾನಮಾನ ಬೇಡಿಕೆಗೆ ಬಾಹ್ಯ ಬೆಂಬಲ ನೀಡುವುದಾಗಿ ಟಿಆರ್ ಎಸ್ ಸಂಸದೀಯ ಪಕ್ಷದ ಮುಖಂಡ ಹಾಗೂ  ಪ್ರಧಾನ ಕಾರ್ಯದರ್ಶಿ ಎನ್. ಕೇಶವ್ ರಾವ್ ತಿಳಿಸಿದ್ದಾರೆ.

ಮತ್ತೊಂದೆಡೆ , ಶಿವಸೇನಾ ಕೂಡಾ ಅವಿಶ್ವಾಸ ನಿರ್ಣಯ ಬೆಂಬಲಿಸುವುದಿಲ್ಲ ಎಂಬ ವಿಶ್ವಾಸವಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಢ್ನವೀಸ್ ತಿಳಿಸಿದ್ದಾರೆ.

 ಈ ಬಗ್ಗೆ  ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಇನ್ನೂ ಏನೂ ಹೇಳಿಲ್ಲ. ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು ಮಾತುಕತೆ ನಡೆಸಲಿದ್ದಾರೆ. ರಾಷ್ಟ್ರೀಯ ವಾದಿ ಹಾಗೂ ಹಿಂದೂತ್ವದ ಶಕ್ತಿಗಳು ಮತ್ತೆ ಕೈಜೋಡಿಸಲಿವೆ  ಎಂದು ಅವರು ಹೇಳಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com