ಆದರೆ ಈಗಲೂ ಕೇಂದ್ರ ಸರ್ಕಾರ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ರಾಜ್ಯದ ಸರಿಸಮಾನ ಆರ್ಥಿಕ ಪ್ಯಾಕೇಜ್ ನೀಡಲು ಸಿದ್ಧ. ಇದರಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದು. ಆಂಧ್ರ ಪ್ರದೇಶ ಸರ್ಕಾರ ಕೇಳುತ್ತಿರುವಂತೆ ಆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲಾಗದು. ಇದಕ್ಕೆ ಸಾಂವಿಧಾನಿಕ ಅಡೆತಡೆಗಳಿದ್ದು, ಅವೈಜ್ಞಾನಿಕವಾಗಿ ನಿರ್ಧಾರಗಳನ್ನು ತೆಗೆದುಕೊಂಡರೆ ಕೇಂದ್ರ ಸರ್ಕಾರಕ್ಕೆ ಆರ್ಥಿಕ ಹೊಡೆತ ಬೀಳುತ್ತದೆ. ಇದೇ ಕಾರಣಕ್ಕೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಬದಲಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿತ್ತು. ಈಗಲೂ ನಾವು ಆಂಧ್ರ ಪ್ರದೇಶ ಸರ್ಕಾರದ ಒಪ್ಪಿಗೆಗೆ ಕಾಯುತ್ತಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ.