ಮನಿಸ್ ಸಿಸೊಡಿಯಾ
ಮನಿಸ್ ಸಿಸೊಡಿಯಾ

ಅರವಿಂದ್ ಕೇಜ್ರಿವಾಲ್ ಕ್ಷಮಾಪಣೆ : ಪಂಜಾಬಿನ ನಾಯಕರೊಂದಿಗೆ ಮಾತುಕತೆ -ಮನ್ನೀಶ್ ಸಿಸೋಡಿಯಾ

ಅರವಿಂದ್ ಕೇಜ್ರಿವಾಲ್ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಪಂಜಾಬಿನ ನಾಯಕರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಎಎಪಿ ಪಂಜಾಬ್ ಉಸ್ತುವಾರಿ ಸಚಿವ ಮನಿಸ್ ಸಿಸೋಡಿಯಾ ತಿಳಿಸಿದ್ದಾರೆ.
Published on

ದೆಹಲಿ: ಶಿರೋಮಣಿ ಅಕಾಲಿ ದಳ ನಾಯಕ ಬಿಕ್ರಮ್ ಸಿಂಗ್ ಮಾಜಿಥಿಯಾ ಅವರೊಂದಿಗೆ  ಮುಖ್ಯಮಂತ್ರಿ  ಅರವಿಂದ್ ಕೇಜ್ರಿವಾಲ್ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ  ಅಸಮಾಧಾನಗೊಂಡಿರುವ ಪಂಜಾಬಿನ ನಾಯಕರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಎಎಪಿ ಪಂಜಾಬ್ ಉಸ್ತುವಾರಿ ಸಚಿವ ಮನಿಸ್ ಸಿಸೋಡಿಯಾ ತಿಳಿಸಿದ್ದಾರೆ.

ಜನರಿಗಾಗಿ ಬೀದಿಯಲ್ಲಿ ಹೋರಾಟ ಮಾಡುತ್ತೇವೆ. ದೇಶಕ್ಕಾಗಿ ಹೋರಾಟ ಮಾಡುವುದು ನಮ್ಮ ಕೆಲಸವಲ್ಲಾ ಆದಾಗ್ಯೂ, ಜನರಿಗಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು  ಹೇಳಿದರು.

 ಡ್ರಗ್ಸ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಮ್ಮ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದ ಪಂಜಾಬ್ ಮಾಜಿ ಕಂದಾಯ ಸಚಿವ ಬಿಕ್ರಮ್ ಸಿಂಗ್ ಮಜಿಥಿಯಾ ಅವರ ಕ್ಷಮೆಯಾಚಿಸಿದ್ದರು. ನಂತರ ಮಾನಹಾನಿ ಪ್ರಕರಣವನ್ನು ಬಿಕ್ರಮ್ ಸಿಂಗ್ ಮಜಿಥಿಯಾ ವಾಪಾಸ್ ಪಡೆದುಕೊಂಡಿದ್ದರು.

ಅರವಿಂದ್ ಕೇಜ್ರಿವಾಲ್ ಕ್ಷಮೆ ಕೋರಿದ್ದ ಹಿನ್ನೆಲೆಯಲ್ಲಿ ಎಎಪಿ ಪಂಜಾಬ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ಭಗವತ್ ಮನ್  ಇಂದು ರಾಜೀನಾಮೆ ಸಲ್ಲಿಸಿದ್ದರು. ಅಲ್ಲದೇ ಪಂಜಾಬಿನ ಹಲವು ಶಾಸಕರು ಹಾಗೂ ಮುಖಂಡರು ಅಸಮಾಧಾನಗೊಂಡಿದ್ದಾರೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com