ಬಿಜೆಪಿ ಸಿಟ್ಟು, ದ್ವೇಷವನ್ನು ಹರಡುತ್ತದೆ, ನಾವು ಪ್ರೀತಿಯನ್ನು ಹರಡುತ್ತೇವೆ: ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷವೊಂದೆ ಇಡೀ ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಸಾಧ್ಯ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ದೇಶ ಸಣ್ಣ ಸಣ್ಣ ವಿಷಯಗಳಿಗೆ ಸಂಬಂಧಪಟ್ಟಂತೆ ....
ಇಂದು ದೆಹಲಿಯಲ್ಲಿ ಕಾಂಗ್ರೆಸ್ ಸಮಗ್ರ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ರಾಹುಲ್ ಗಾಂಧಿ
ಇಂದು ದೆಹಲಿಯಲ್ಲಿ ಕಾಂಗ್ರೆಸ್ ಸಮಗ್ರ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ರಾಹುಲ್ ಗಾಂಧಿ
Updated on

ನವದೆಹಲಿ: ಕಾಂಗ್ರೆಸ್ ಪಕ್ಷವೊಂದೆ ಇಡೀ ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಸಾಧ್ಯ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಇಂದು ದೇಶ ಸಣ್ಣ ಸಣ್ಣ ವಿಷಯಗಳಿಗೆ ಸಂಬಂಧಪಟ್ಟಂತೆ ಇಬ್ಭಾಗವಾಗುತ್ತಿದ್ದು ಎಲ್ಲಾ ಗುರುತುಗಳು ಬೆದರಿಕೆಗೆ ಒಳಗಾಗುತ್ತಿವೆ. ಬಿಜೆಪಿಯವರು ಸಿಟ್ಟು, ಆಕ್ರೋಶಗಳನ್ನು ಬಳಸುತ್ತಿದ್ದರೆ ನಾವು ಪ್ರೀತಿಯನ್ನು ಬಳಸುತ್ತಿದ್ದೇವೆ, ಈ ಸಂದರ್ಭದಲ್ಲಿ ನಾನು ಒಂದು ವಿಷಯ ಹೇಳಬಯಸುತ್ತೇನೆ ಅದೆಂದರೆ ಈ ದೇಶ ಪ್ರತಿಯೊಬ್ಬರಿಗೂ ಸೇರಿರುವುದಾಗಿದ್ದು ಕಾಂಗ್ರೆಸ್ ಏನು ಮಾಡುವುದಿದ್ದರೂ ದೇಶದ ಜನತೆಯ ಒಳಿತಿಗಾಗಿ ಮಾಡುತ್ತದೆ ಎಂದು ಪ್ರತಿಪಾದಿಸಿದರು.

ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿ ನಿನ್ನೆ ಆರಂಭಗೊಂಡ ಕಾಂಗ್ರೆಸ್ ನ ಸಮಗ್ರ ಅಧಿವೇಶನದ ಎರಡನೇ ದಿನವಾದ ಇಂದು ಮಾತನಾಡಿದ ರಾಹುಲ್ ಗಾಂಧಿ, ಹೊಸ ದಿಕ್ಕು ಮತ್ತು ಹೊಸ ದೃಷ್ಟಿಕೋನದತ್ತ ಸಾಗಲು ಇದು ಸರಿಯಾದ ಸಮಯವಾಗಿದೆ ಎಂದರು, ದೇಶದ ರೈತರ ಸಮಸ್ಯೆಗಳು ಮತ್ತು ನಿರುದ್ಯೋಗ ಸಮಸ್ಯೆಗಳ ಕುರಿತು ಕೂಡ ಚರ್ಚೆ ನಡೆಸಿದರು.

ಇಂದು ರಾಹುಲ್ ಗಾಂಧಿಯವರು ಅಧಿವೇಶನದಲ್ಲಿ ಕಾಂಗ್ರೆಸ್ ನ ದೂರದೃಷ್ಟಿ ದಾಖಲೆಗಳು ಮತ್ತು ರಾಜಕೀಯ ನಕಾಶೆಯನ್ನು ಬಿಡುಗಡೆ ಮಾಡಲಿದ್ದಾರೆ. ಪಕ್ಷದ ಕಾರ್ಯಕರ್ತರು 2019ರಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಮತ್ತು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳನ್ನು ಸೋಲಿಸಲು ಮಾಡಬೇಕಾದ ಕೆಲಸಗಳತ್ತ ಮಾರ್ಗದರ್ಶಿಯಂತೆ ಬೆಳಕು ಚೆಲ್ಲಲಿದೆ.

ಅಧಿವೇಶನದಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖಂಡರು ಭಾಗವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com