ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ....
ನರೇಂದ್ರ ಮೋದಿ
ನರೇಂದ್ರ ಮೋದಿ
ಶ್ರೀಶೈಲ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಅಲ್ಲದೆ ಯುಗಾದಿ ಎಂದರೆ ಹೊಸ ಶಕೆ ಆರಂಭವಾದಂತೆ ಎಂಬ ಅರ್ಥವಿದೆ. ಯುಗಾದಿ ನಮ್ಮ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ಯುಗಾದಿಯ ಮಹತ್ವವನ್ನು ಬಣ್ಣಿಸಿದ್ದಾರೆ.
ಇಂದು ಆಂಧ್ರಪ್ರದೇಶದ ಶ್ರೀಶೈಲ ಪೀಠದ ಸಹಯೋಗದೊಂದಿಗೆ ರಾಷ್ಟ್ರೀಯ ಜನ ಜಾಗೃತಿ ವೇದಿಕೆ ಆಯೋಜಿಸಿದ್ದ ರಾಷ್ಟ್ರೀಯ ಧರ್ಮ ಜಾಗೃತಿ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರ, ಶಿವಶರಣೆ ಹೇಮರಡ್ಡಿ ಮಲ್ಲಮ್ಮರನ್ನು ಸ್ಮರಿಸಿದರು.
ಬಸವಣ್ಣನವರ ತತ್ವಾದರ್ಶಗಳನ್ನು ನಮ್ಮ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ತಿಳಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ನಂತರ ಆಶೀರ್ವಚನ ನೀಡಿದ ಡಾ.ಚೆನ್ನಸಿದ್ದರಾಮ ಪಂಡಿತಾರಾಧ್ಯ ಭಗವತ್ಪಾದರು ಪ್ರಧಾನಿ ಮೋದಿ ಅವರಿಗೆ ಯುಗಾದಿಯ ಶುಭ ಕೋರಿ ಶ್ರೀಶೈಲ ಕ್ಷೇತ್ರಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಜತೆಗೆ ಪ್ರಧಾನಿ ಮೋದಿ ಅವರ ಆರೋಗ್ಯ ಚೆನ್ನಾಗಿರಲೆಂದು ಮಲ್ಲಿಕಾರ್ಜುನನ ಬಳಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com